ತುಮಕೂರು : ಯುವಕನೋರ್ವ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ. ಯುವಕನ ಈ ಒಂದು ಸಾಹಸ ಹಾಗೂ ಧೈರ್ಯಕ್ಕೆ ಸ್ವತಃ ಅರಣ್ಯ ಸಂಬಂಧಿಗಳೇ ಶಾಕ್ ಗೆ ಒಳಗಾಗಿದ್ದಾರೆ.
ಹೌದು ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ಯುವಕನೋರ್ವ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಘಟನೆ ಜರುಗಿದೆ.ಇಂದು ಪುರಲೇಹಳ್ಳಿ ರಸ್ತೆಯಲ್ಲಿರುವ ಕುಮಾರ್ ಎಂಬವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದೆ.ಈ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬಿಟ್ಟು ಚಿರತೆ ಸೆರೆಹಿಡಿಯುವ ಸಲುವಾಗಿ ಸಕಲ ಸಲಕರಣೆಗಳೊಂದಿಗೆ ಬಂದಿದ್ದರು. ಆದರೆ ಚಿರತೆ ಸೆರೆಹಿಡಿಯಲಾಗದೇ ಕೈಚೆಲ್ಲಿ ಕುಳಿತರು.
ಈ ವೇಳೆ ಗ್ರಾಮದ ಆನಂದ್ ಎಂಬವರು ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ್ದಾರೆ. 5 ವರ್ಷದ ಚಿರತೆಯನ್ನು ಯುವಕ ಸೆರೆಹಿಡಿದಿದ್ದನ್ನು ಕಂಡು ಅರಣ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ.ಆನಂದ್ ಸಾಹಸಕ್ಕೆ ಇಡೀ ಸುತ್ತಮುತ್ತಲಿನ ಗ್ರಾಮಸ್ಥರೆಲ್ಲಾ ಖುಷಿಯಾಗಿದ್ದು, ಅವರ ಧೈರ್ಯ, ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.