ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಪ್ಯಾಲಯಗುರ್ಕಿಯಲ್ಲಿ ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡದಂತೆ ಅಮ್ಮ ಮತ್ತು ಅಣ್ಣ ನಿರಾಕರಿಸಿದ ಹಿನ್ನೆಲೆಯಲ್ಲಿ ನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಯುವಕನನ್ನು ಗಿರೀಶ್ (21) ಎಂದು ಗುರುತಿಸಲಾಗಿದೆ.
ಗಿರೀಶ್ ಗ್ರಾಮದ ಮುತ್ತರಾಯಸ್ವಾಮಿ ದೇಗುಲದ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.