ಶಿವಮೊಗ್ಗ : ಹೋರಿ ತವಿದಿದ್ದರಿಂದ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ.
ಹೋರಿ ತಿವಿದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಪುನೀತ್ ಆಚಾರ್ (19) ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್ ಶಿಕಾರಿಪುರ ಪಟ್ಟಣದ ಹಾಸ್ಟೆಲ್ನಲ್ಲಿದ್ದುಕೊಂಡು ಐಟಿಐ ಓದುತ್ತಿದ್ದ.ಹೋರಿ ತಿವಿದು ಗಂಭೀರವಾಗಿ ಗಾಯಗೊಂಡಿದ್ದ ಪುನೀತ್ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಜಿಲ್ಲಾಸ್ಪತ್ರೆಯಲ್ಲಿ ಪುನೀತ್ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ.