ಚಿಕ್ಕಮಗಳೂರು : ಚಿಕ್ಕಮಂಗಳೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರಿಂದ ಜಿಲ್ಲೆಯಾದ್ಯಂತ ಹಲವು ಪ್ರದೇಶಗಳಲ್ಲಿ, ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಇದೆ ವೇಳೆ ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ನಾಪತ್ತೆಯಾಗಿದ್ದಾನೆ.
ಹೌದು ನುಗ್ಗಿಮಕ್ಕಿ ಗ್ರಾಮದ ಬಳಿ ತುಂಗಾ ನದಿಯಲ್ಲಿ ಯುವಕನೊಬ್ಬ ಈಜಲು ಹೋಗಿ ನಾಪತ್ತೆಯಾಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನುಗ್ಗಿಮಕ್ಕಿ ಎಂಬಲ್ಲಿ ಈ ಒಂದು ಘಟನೆ ಸಂಭವಿಸಿದೆ. ತುಂಗಾ ನದಿಯಲ್ಲಿ ಮನೋಜ್ (17) ನಾಪತ್ತೆಯಾಗಿರುವ ಯುವಕ ಎಂದು ತಿಳಿದು ಬಂದಿದೆ.
ಸ್ನೇಹಿತರ ಜೊತೆಗೆ ನದಿಯಲ್ಲೂ ಈಚಲು ತೆರಳಿದ್ದಾಗ ಈ ಒಂದು ಘಟನೆ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಈಗಾಗಲೇ ಹಲವೆಡೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನಾಪತ್ತೆಯಾಗಿರುವ ಯುವಕನಿಗಾಗಿ ಇದೀಗ ಶೋಧ ಕಾರ್ಯ ಮುಂದುವರಿದಿದೆ.