ಕಲಬುರಗಿ : ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ.
ಕಲಬುರಗಿ ನಗರದ ರಿಂಗ್ ರೋಡ್ ನ ಡಾಬವೊಂದರ ಬಳಿಯ ನಿರ್ಜನ ಪ್ರದೇಶದಲ್ಲಿ ಪ್ರವೀಣ್ ಬಿರಾದಾರ (೨೫) ಎಂಬ ಯುವಕನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಕೊಲೆಯಾದ ಪ್ರವೀಣ್ ಬಿರಾದಾರ ಆಳಂದ ತಾಲUಕಿನ ಬೊಮ್ಮನಹಳ್ಳಿ ನಿವಾಸಿಯಾಗಿದ್ದಾನೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.