ಹಾಸನ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು ಹಾಸನದಲ್ಲಿ ಯುವಕನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹಂತಕರು ಭೀಕರವಾಗಿ ಕೊಲೆ ಮಾಡಿದ್ದಾರೆ ಬಳಿಕ ಕೊಲೆ ಮಾಡಿದ ನಂತರ ಶವದ ಎದುರು ಸೆಲ್ಫಿ ವಿಡಿಯೋ ಮಾಡಿ ನಾವು ಕೊಲೆ ಮಾಡಿದ್ದೇವೆ ಎಂದು ವಿಡಿಯೋ ಹರಿ ಬಿಟ್ಟಿದ್ದಾರೆ.
ಹಾಸನದಲ್ಲಿ ಈ ಒಂದು ಭೀಕರ ಕೊಲೆ ನಡೆದಿದ್ದು ನೋಡಿ ನಾವು ಇವನನ್ನು ಮರ್ಡರ್ ಮಾಡಿದ್ದೇವೆ. ನಾವೇ ಹೊಡೆದು ಕೊಂಡಿದ್ದೇವೆ ಎಂದು ಯುವಕನ ಶವ ತೋರಿಸಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂತಕರು ಅಪ್ಲೋಡ್ ಮಾಡಿದ್ದಾರೆ. ಸದ್ಯಕ್ಕೆ ಪೊಲೀಸರು ವಿಡಿಯೋ ಆದರಿಸಿ ಶವಕ್ಕಾಗಿ ಶೋಧ ನಡೆಸುತ್ತಿದ್ದಾರೆ. ಹಾಸನದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.






