ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿಯಾಗಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ನೆಲಮಂಗಲ ಹೆದ್ದಾರಿ ತೋಣಚಿಕೊಪ್ಪದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ 21 ವರ್ಷದ ಬೈಕ್ ಸವಾರ ಮಧುಸೂದನ್ ಸಾವನ್ನಪ್ಪಿದ್ದಾರೆ.
ನಿನ್ನೆ ರಾತ್ರಿ ಮಧುಸೂದನ್ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.








