ವಿಜಯಪುರ : ಗಣಪತಿ ವಿಸರ್ಜನೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪರವಾನಿಗೆ ಹೊಂದಿದ್ದ ಪಿಸ್ತೂಲಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಯುವಕನನ್ನು ಪ್ರಶಾಂತ್ ಬಿರಾದಾರ ಎಂದು ಗುರುತಿಸಲಾಗಿದೆ.
ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ಬರೆದ ಪ್ರಶಾಂತ್ ಬಿರಾದರ್ ನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಪರವಾನಿಗೆ ಹೊಂದಿದ್ದ ಪಿಸ್ತೂಲ್ ನಿಂದ ಪ್ರಶಾಂತ್ ಗುಂಡು ಹಾರಿಸಿದ್ದಾನೆ. ಗಣೇಶ ವಿಸರ್ಜನೆ ವೇಳೆ ಸಾರ್ವಜನಿಕ ಸ್ಥಳದಲ್ಲಿ ಗಾಳಿಯಲ್ಲಿ ಫೈರಿಂಗ್ ಮಾಡಿದ್ದಾನೆ.
ಈ ಸಂದರ್ಭದಲ್ಲಿ ಸ್ಥಳೀಯರು ಗಾಳಿಯಲ್ಲಿ ಗುಂಡು ಹಾರಿಸಿದ ವೇಳೆ ಕೇಕೆ ಹಾಕಿದ್ದಾರೆ. ನಿನ್ನೆ ರಾತ್ರಿ ಗಾಳಿಯಲ್ಲಿ ಗುಂಡು ಹಾರಿಸಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಶಾಂತನನ್ನು ಸದ್ಯ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.