ದಾವಣಗೆರೆ : ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭವಾಗಿ ಗಲಾಟೆ ವೇಳೆ ಚಾಕುವಿನಿಂದ ಇರಿದು ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಬಳಿಯ ಅಡಿಕೆ ತೋಟದಲ್ಲಿ ಈ ಒಂದು ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಶುರುವಾಗಿ, ಬಳಿಕ ಮೊಹಮ್ಮದ್ ಜಾವೇದ್ (25) ಎನ್ನುವ ಯುವಕ ಕೊಲೆಯಾಗಿದ್ದಾನೆ. ಘಟನೆ ಸಂಭಂದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ಕುರಿತು ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.