ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧರ್ಮಸ್ಥಳ ಕ್ಷೇತ್ರದ ಕುರಿತು ಯೂಟ್ಯೂಬರ್ ಸಮೀರ್ ಈ ಹಿಂದೆ AI ತಂತ್ರಜ್ಞಾನದ ಮೂಲಕ ಯೂಟ್ಯೂಬ್ ನಲ್ಲಿ ವಿಡಿಯೋ ಹರಿ ಬಿಟ್ಟಿದ್ದ. ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ, ಈ ವಿಚಾರವಾಗಿ ನಿನ್ನೆ ಪೊಲೀಸರು ಬೆಂಗಳೂರಿನಲ್ಲಿರುವ ಯುಟ್ಯೂಬರಿ ಸಮೀರ್ ಮನೆಯ ಮೇಲೆ ದಾಳಿ ನಡೆಸಿ ವಿಡಿಯೋ ಮಾಡಿದ ಕಂಪ್ಯೂಟರ್ ಹಾಗೂ ಫೋನ್ ಹಾರ್ಡ್ ಡಿಸ್ಕ್ ಜಪ್ತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ, ಎಫ್‌ಎಸ್ಎಲ್ ವಿಭಾ ಗದ ಸೋಕೊ ಸಿಬ್ಬಂದಿ ಜೊತೆ ಸಮೀರ್‌ರ ಮನೆಗೆ ಭೇಟಿ ನೀಡಿ, ಮಹಜರು ನಡೆಸಿದರು. ಪೊಲೀಸರು ಮುಂಚಿತ ವಾಗಿಯೇ ಸಮೀರ್‌ಗೆ ಮಹಜರು ಪ್ರಕ್ರಿಯೆಗೆ ಆಗಮಿ ಸುವುದಾಗಿ ಮಾಹಿತಿ ನೀಡಿದ್ದರು. ಹೀಗಾಗಿ, ಆತ ಮನೆ ಯಲ್ಲಿಯೇ ಇದ್ದರು. ಜೊತೆಗೆ, ಗಿರೀಶ್ ಮಟ್ಟಣ್ಣವರ್ ಕೂಡ ಇದ್ದರು. ಸ್ಥಳ ಸ್ಥಳ ಮಹಜರು ನಡೆಸಿದ ಪೊಲೀಸರು, ಅದರ ವಿಡಿಯೋ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮನೆಯಿಂದ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ಪೋನ್ ಗಳನ್ನು ಜಪ್ತಿ ಮಾಡಿ ತೆರಳಿದರು.
ನಂತರ ಗಿರೀಶ್ ಮಟ್ಟಣ್ಣವರ್ ಮಾತನಾಡಿ, ಇದು ಪೊಲೀಸ್ ರೇಡ್ ಅಲ್ಲ. ‘ಧರ್ಮಸ್ಥಳ ದಣಿಗಳ ಚಾಟೂ (ಗುಲಾಮರು)ಗಳು’ ಎಂದು ಎಐ ವಿಡಿಯೋದಲ್ಲಿ ಬಳಸಿದ ಒಂದು ಶಬ್ದವನ್ನು ಉಲ್ಲೇಖಿಸಿ ಬೆಳ್ತಂಗಡಿ ಪೊಲೀಸರು ಉದ್ದೇಶಪೂರ್ವಕವಾಗಿ ಸುಮೋಟೋ ಕೇಸ್ ದಾಖಲು ಮಾಡಿಕೊಂಡಿದ್ದರು. ಆ ಕೇಸ್‌ನ ಸಂಬಂಧ ಸ್ಥಳ ಮಹಜರು ಮಾಡಿದ್ದಾರೆ ಎಂದರು.