ಬೆಂಗಳೂರು : ಬೆಂಗಳೂರಿನಲ್ಲಿ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಆರೋಪದ ಹಿನ್ನೆಲೆ ಯೂಟ್ಯೂಬರ್ ಶಬಾಜ್ ಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಯೂಟ್ಯೂಬರ್ ಶಬಾಜ್ ಖಾನ್ ಉಪ ಔಷಧ ನಿಯಂತ್ರಣ ಅಧಿಕಾರಿ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಫಾರ್ಮಸಿಗಳಿಗೂ ನುಗ್ಗಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆಯಿಡ್ಡಿ ದಾಂಧಲೆ ನಡೆಸಲಾಗಿತ್ತು ಎನ್ನುವ ಆರೋಪದ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.