ಬೆಂಗಳೂರು : ನಟ ಧ್ರುವ ಸರ್ಜಾ ಅವರು ನಟಿಸಿರುವ ಮಾರ್ಟಿನ್ ಸಿನಿಮಾದ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಯೂಟ್ಯೂಬರ್ ಸ್ಟ್ರಾಂಗ್ ಸುಧಾಕರ್ ಕೆಟ್ಟದಾಗಿ ರಿವ್ಯೂ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಧ್ರುವ ಸರ್ಜಾ ಅಭಿಮಾನಿಗಳು ದೂರ ನೀಡಿದ್ದರು. ಹಾಗಾಗಿ ಸುಧಾಕರನನ್ನು ಮಾದನಾಯಕನಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಳಿಕ ಇನ್ನೊಮ್ಮೆ ಈ ರೀತಿ ಪುನರಾವರ್ತಿತ ಆಗ್ಬಾರ್ದು ಎಂದು ವಾರ್ನಿಂಗ್ ಕೊಟ್ಟು ಕಳುಸಿದ್ದಾರೆ ಎಂದು ತಿಳಿದುಬಂದಿದೆ.
ನಟ ಧ್ರುವ ಸರ್ಜಾ ಅವರ ಮಾರ್ಟಿನ್ ಸಿನಿಮಾದ ಕುರಿತಂತೆ ಯೂಟ್ಯೂಬರ್ ಸ್ಟ್ರಾಂಗ್ ಸುಧಾಕರ್ ಸಾಮಾಜಿಕ ಜಾಲತಾಣದಲ್ಲಿ ನಾನು ಜೀವನದಲ್ಲಿ ನೋಡಿದ ಅತ್ಯಂತ ಕೆಟ್ಟ ಸಿನಿಮಾ. ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಎಲ್ಲರೂ ಕೆಜಿಎಫ್ ಸಿನಿಮಾ ಕಾಪಿ ಮಾಡುತ್ತಿದ್ದಾರೆ. ಕೆಜಿಎಫ್ ಸಿನಿಮಾ ಮಾದರಿಯಲ್ಲಿಯೇ ಕಳಪೆಯಾಗಿ ಉಪೇಂದ್ರ ಅವರ ‘ಕಬ್ಜ’ ಸಿನಿಮಾ ಮಾಡಲಾಗಿದೆ. ಕಬ್ಜ ಸಿನಿಮಾದ ಮುಂದುವರಿದ ಕಳಪೆ ಭಾಗ ಎನ್ನುವಂ ರೀತಿಯಲ್ಲಿ ಮಾರ್ಟಿನ್ ಸಿನಿಮಾ ಮಾಡಲಾಗಿದೆ ಎಂದು ಹೇಳಿಕೆ ನೀಡಿರುವ ವಿಡಿಯೋ ಅಪ್ಲೋಡ್ ಮಾಡಿದ್ದರು.
ಈ ಕುರಿತು ನಟ ಧ್ರುವ ಸರ್ಜಾ ಅಭಿಮಾನಿಗಳು ದೂರು ನೀಡಿದ್ದಾರೆ.ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಸುಧಾಕರ್ ನನ್ನು ಅರೆಸ್ಟ್ ಮಾಡಿ ಠಾಣೆಗೆ ಕರೆತಂದಿದ್ದಾರೆ. ನಿನ್ನ ವೈಯಕ್ತಿಕ ವರ್ಚಿಸ್ಸಿಗೆ ಸಿನಿಮಾ ಬಗ್ಗೆ ಕೆಟ್ಟದಾಗಿ ರಿವ್ಯೂ ಮಾಡಿದ ವಿಡಿಯೋವನ್ನು ಪೊಲೀಸರು ಡಿಲೀಟ್ ಮಾಡಿಸಿದ್ದಾರೆ. ಜೊತೆಗೆ, ಸ್ಟಾಂಗ್ ಸುಧಾಕರನಿಗೆ ಪೊಲೀಸ್ ಠಾಣೆಯಲ್ಲಿ ಕೂರಿಸಿ ಎಚ್ಚರಿಕೆ ನೀಡಿ, ಆತನಿಂದ ತಪ್ಪೊಪ್ಪಿಗೆ ಪತ್ರವನ್ನು ಬರೆಸಿಕೊಂಡು ವಿಡಿಯೋ ಡಿಲೀಟ್ ಮಾಡಿದ್ದರ ಬಗ್ಗೆ ಅಧಿಕೃತ ಮಾಹಿತಿ ಖಚಿತಪಡಿಸಿಕೊಂಡಿದ್ದಾರೆ.