ಕೊಪ್ಪಳ : ಸಿಎಂ ಸಿದ್ದರಾಮಯ್ಯ ಬೆಂಗವಾಲು ಪಡೆಗೆ ವಿರುದ್ಧ ಕಾರು ಚಾಲನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಾಸಕ ಜನಾರ್ಧನ ರೆಡ್ಡಿ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿದೆ. ಗಂಗಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹೌದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಿನ್ನೆ ರಾತ್ರಿ ಈ ಒಂದು ಘಟನೆ ನಡೆದಿತ್ತು. ಕರ್ತವ್ಯದಲ್ಲಿದ್ದ ಪೊಲೀಸರಿಂದ ಚಾಲಕನ ವಿರುದ್ಧ ಕಂಪ್ಲೇಂಟ್ ನೀಡಲಾಗಿದೆ. ಗಂಗಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಝೀರೋ ಟ್ರಾಫಿಕ್ ಕಾನೂನು ಉಲ್ಲಂಘನೆ ಫೇಸ್ ದಾಖಲಾಗಿದೆ.
ಘಟನೆ ಹಿನ್ನೆಲೆ?
ರಾಯಚೂರಿನಿಂದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ ಇದ್ದ ವಾಹನ ತೆರಳುತ್ತಿದ್ದಾಗ ಸ್ವತಃ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಕೂಡ ವಿರುದ್ಧ ದಿಕ್ಕಿನಲ್ಲಿ ಚಲಿಸಿರುವಂತಹ ಘಟನೆ ಜಿಲ್ಲೆಯ ಗಂಗಾವತಿ ನಗರದ ಸಿಬಿಎಸ್ ವೃತ್ತದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ.
ಸಿಎಂ ಬಂದ ಹಿನ್ನಲ್ಲೆ ಜೀರೊ ಟ್ರಾಪಿಕ್ ಮಾಡಲಾಗಿದೆ. ಸುಮಾರು 20 ನಿಮಿಷ ಟ್ರಾಫಿಕ್ ಜಾಮ್ ಆಗಿದ್ದರಿಂದ ಡಿವೈಡರ್ ದಾಟಿ ಒನ್ ವೇನಲ್ಲಿ ವಿರುದ್ಧ ದಿಕ್ಕಿಗೆ ರೆಡ್ಡಿ ಚಾಲಕ ಕಾರು ಚಲಾಯಿಸಿದ್ದಾರೆ. ಸ್ವಲ್ಪ ವ್ಯತ್ಯಾಸ ಆಗಿದ್ದರೂ ಭಾರಿ ಅನಾಹುತ ನಡೆಯುತ್ತಿತ್ತು. ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ವಿಡಿಯೋ ನೋಡಿ.