ನವದೆಹಲಿ : ಪಂಜಾಬ್ ಮಾಜಿ ಸಿಎಂ ಹಾಗೂ ಜಲಂಧರ್‌ನ ಕಾಂಗ್ರೆಸ್ ಅಭ್ಯರ್ಥಿ ಚರಣ್‌ಜಿತ್ ಸಿಂಗ್ ಚನ್ನಿ ವಿವಾದಿತ ಮಾತಿನಿಂದಾಗಿ ಸುದ್ದಿಯಾಗಿದ್ದಾರೆ. ಹಾಗೇನಾದರೂ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ವಾಘಾ (ಭಾರತ-ಪಾಕಿಸ್ತಾನ) ಗಡಿಯನ್ನು ಓಪನ್ ಮಾಡಲಿದ್ದೇವೆ ಎಂದಿದ್ದಾರೆ.
ಹೌದು ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಮತ್ತು ಪ್ರಸ್ತುತ ಪಂಜಾಬ್‌ನ ಜಲಂಧರ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿರುವ ಚರಂಜಿತ್ ಸಿಂಗ್ ಚನ್ನಿ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದರೆ ವಾಘಾ ಗಡಿ (ಭಾರತ-ಪಾಕಿಸ್ತಾನ ಗಡಿ) ತೆರೆಯಲಾಗುವುದು ಎಂದು ಹೇಳಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಪ್ರದೇಶವನ್ನು ಅಭಿವೃದ್ಧಿಪಡಿಸಿ ವಾಘಾ ಗಡಿಯನ್ನು ತೆರೆಯುತ್ತೇವೆ ಇದರಿಂದ ಬೇರೆ ದೇಶಗಳ ಸಹೋದರರು ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಾರೆ, ಇದು ನಮ್ಮ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತದೆ.ಗಡಿ ತೆರೆಯುವುದರೊಂದಿಗೆ, ಪಾಕಿಸ್ತಾನದ ಜನರು ಚಿಕಿತ್ಸೆಗಾಗಿ ಭಾರತಕ್ಕೆ ಬರುತ್ತಾರೆ ಮತ್ತು ಇದು ಪಂಜಾಬ್‌ನ ವೈದ್ಯಕೀಯ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.