ಕೊಡಗು : ಕೊಡಗು ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು, ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ಬಂದೂಕಿನಿಂದ ಫೈರಿಂಗ್ ನಡೆಸಲಾಗಿದೆ. ಕೊಡುಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅತ್ತಿಮಂಗಲ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕಾರ್ಮಿಕರಾದ ಸತೀಶ್ (28) ಹಾಗೂ ಮಿಟ್ಟು (25) ಎನ್ನುವವರಿಗೆ ಗಂಭೀರವಾದ ಗಾಯಗಳಾಗಿವೆ. ಇಬ್ಬರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಗುಂಡು ಹಾರಿಸಿದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ನೆಡೆಸುತ್ತಿದ್ದಾರೆ.








