ಶಿವಮೊಗ್ಗ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ವಿದೇಶದಲ್ಲಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಕೊನೆಗೂ ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ ಲುಫ್ತಾನ್ಸ ಫ್ಲೈಟ್ ಮೂಲಕ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದ ತಕ್ಷಣ ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ವಾರಂಟ್ ಸಿದ್ಧಪಡಿಸಲಾಗಿದೆ. ವಿಶೇಷ ತನಿಕಾ ತಂಡದ ಅಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರುತ್ತಿರುವ ಬಗ್ಗೆ ಮಾಹಿತಿ ಇದೆ ಎಂದು ತಿಳಿಸಿದರು.
ಆದರೆ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದ ಮೇಲೆ ಖಚಿತವಾಗಲಿದೆ ಎಂದು ಶಿವಮೊಗ್ಗದಲ್ಲಿ ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಈಗಾಗಲೇ ಪ್ರಜ್ವಲ್ ಆಗಮಿಸುತ್ತಿರುವ ವಿಮಾನ ಜರ್ಮನಿಯ ಯೂನಿಕ್ ಏರ್ಪೋರ್ಟ್ ಇಂದ ಟೆಕ್ ಆಫ್ ಆಗಿದೆ ಇಂದು ಮಧ್ಯರಾತ್ರಿ 12.30ಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಬಂದ ತಕ್ಷಣ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.