ಮಡಿಕೇರಿ : ಕಾಂಗ್ರೆಸ್ಸಿನ ಹಿರಿಯ ನಾಯಕ ಮಿಟ್ಟು ಚಂಗಪ್ಪ ಅವರು ಇಂದು ನಿಧನರಾಗಿದ್ದಾರೆ. ಕೊಡಗು ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕ ಬಿಟ್ಟು ಚಂಗಪ್ಪ ಅವರು ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಇವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಾಗು ಆರ್. ಗುಂಡೂರಾವ್ ಸೇರಿದಂತೆ ಹಲವು ನಾಯಕರ ಆಪ್ತರಾಗಿದ್ದರು ಎನ್ನಲಾಗಿದ್ದು, ಮಡಿಕೇರಿಯ ಗಾಂಧೀ ಮೈದಾನದಲ್ಲಿ ಇಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಡಿಕೇರಿ ನಗರದಲ್ಲಿ ಇಂದು ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.