ಬೆಂಗಳೂರು : ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ರದ್ದುಗೊಳಿಸಿ ಎಂದು ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾಗೊಳಿಸಿದೆ ಎಂದು ತಿಳಿದುಬಂದಿದೆ.
ಪ್ರಕರಣದ ಕುರಿತು ವಿಚಾರಣೆ ನಡೆಸಿದ ಹೈಕೋರ್ಟಿನ ನ್ಯಾ. ಕೃಷ್ಣ ಎಸ್ ದೀಕ್ಷಿತರಿದ್ದ ಹೈಕೋರ್ಟ್ ಪೀಠ ಇದೀಗ ಪ್ರಕರಣ ಕುರಿತಂತೆ ಆದೇಶ ಹೊರಡಿಸಿದೆ.ಸಾಕ್ಷ ವಿಚಾರಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಸಿಬಿಐ ಪರ ಅಭಿಯೋಜಕರಿಗೆ ಹೈಕೋರ್ಟ್ ಇದೀಗ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ಏನಿದು ಪ್ರಕರಣ?
ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಗೌಡರ್ ಅವರನ್ನು ಜೂನ್ 2016 ರಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 2020 ರಲ್ಲಿ ವಿನಯ್ ಕಲಕರ್ಣಿ ಅವರನ್ನು ಬಂಧಿಸಲಾಗಿತ್ತು.ಅಲ್ಲದೆ, ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಒಂದು ವೇಳೆ ಧಾರವಾಡಕ್ಕೆ ತೆರಳಿದರೆ ಜಾಮೀನು ರದ್ಧಪಡಿಸುವುದಾಗಿ ಕೋರ್ಟ್ ಎಚ್ಚರಿಕೆ ಕೂಡ ನೀಡಿತ್ತು.