ಬೆಂಗಳೂರು : ಕಳೆದ ಬೆಳಗಾವಿ ಅಧಿವೇಶನದಲ್ಲಿ ರಾಜ್ಯಪಾಲರ ಅಂಗೀಕಾರಕ್ಕೆ ರಾಜ್ಯ ಸರ್ಕಾರ ಹಲವು ಮಸೂದೆಗಳನ್ನು ಕಳುಹಿಸಿಕೊಡಲಾಗಿತ್ತು ಆದರೆ ರಾಜ್ಯಪಾಲರು ಮಸೂದೆಗಳನ್ನು ಅಂಗೀಕಾರ ಹಾಕದೆ ವಾಪಸ್ ಕಳಿಸಿದ್ದಾರೆ ಇದೀಗ ರಾಜಪಾಲರ ನಡೆಗೆ ರಾಜ ಸರ್ಕಾರ ತೀವ್ರವಾಗಿ ಖಂಡಿಸಿದ್ದು ಕಾನೂನು ಹೋರಾಟಕ್ಕೆ ಚಿಂತನೆ ನಡೆಸಿದೆ.
ಹೌದು ರಾಜ್ಯಪಾಲರು ನಡೆಯಿಂದ ರಾಜ್ಯ ಸರ್ಕಾರ ಆಕ್ರೋಶಗೊಂಡಿದ್ದು, ರಾಜ್ಯಪಾಲರು ವಿರುದ್ಧ ಕಾನೂನು ಹೋರಾಟಕ್ಕೆ ಇದೀಗ ಚಿಂತನೆ ನಡೆಸುತ್ತಿದೆ. ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಸಂಘರ್ಷ ಮುಂದುವರೆದಿದ್ದು, ಮಸೂದೆಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸುತ್ತಿದ್ದಾರೆ. ರಾಜಪಾಲರಿಂದ ರಾಜ್ಯ ಮಸೂದೆಗಳು ಇದೀಗ ವಾಪಸ್ ಕಳುಹಿಸಿದ್ದಾರೆ.
ಸರ್ಕಾರದ ನಾಲ್ಕು ಮಸೂದೆಗಳನ್ನು ರಾಜ್ಯಪಾಲರು ಇದೀಗ ವಾಪಸ್ ಕಳುಹಿಸಿದ್ದಾರೆ. ಅಲ್ಲದೇ ಇನ್ನು ನಾಲ್ಕು ಮಸೂದೆ ಅಂಗೀಕರಿಸಲು ರಾಜಪಾಲರು ಬಾಕಿ ಉಳಿಸಿಕೊಂಡಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ನಾಲ್ಕು ವಿಧೇಯಕ ಅಂಗೀಕಾರಗೊಂಡಿತ್ತು. ಆದರೆ ರಾಜ್ಯಪಾಲರು ನಾಲ್ಕು ವಿಧೇಯಕಗಳಿಗೆ ಅಂಗೀಕಾರ ಹಾಕದೆ ವಾಪಸ್ ಕಳುಹಿಸಿದ್ದಾರೆ. ಹಾಗಾಗಿ ಇದೀಗ ಗವರ್ನರ್ ವಿರುದ್ಧ ರಾಜ್ಯ ಸರ್ಕಾರ ಆಕ್ರೋಶ ಹೊರಹಾಕಿದ್ದು ಕಾನೂನು ಹೋರಾಟಕ್ಕೆ ಚಿಂತನೆ ನಡೆಸುತ್ತಿದೆ.
ರಾಜ್ಯಪಾಲರಿಂದ ವಾಪಸ್ ಕಳುಹಿಸಿದ ಮಸೂದೆಗಳು
1) ಕರ್ನಾಟಕ ಮಿನರಲ್ಸ್ ಹಕ್ಕು ಮತ್ತು ಬೇರಿಂಗ್ ಲ್ಯಾಂಡ್ ಟ್ಯಾಕ್ಸ್ 2024
2) ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಮುಜರಾಯಿ ವಿಧೇಯಕ 2024
3) ಕರ್ನಾಟಕ ಸಹಕಾರಿ ಸಹಿತಿಗಳ ತಿದ್ದುಪಡಿ ವಿಧೇಯಕ 2024
4) ಗದಗ ಬೆಟಗೇರಿ ವ್ಯಾಪಾರ ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ ವಿಧೇಯಕ 2024
ಈ ನಾಲ್ಕು ವಿಧೇಯಕಗಳನ್ನು ಅಂಗೀಕರಿಸಿದೆ ವಾಪಸ್ ಕಳಿಸಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ಇದೀಗ ರಾಜ್ಯ ಸರ್ಕಾರ ರಾಜ್ಯಪಾಲರ ಈ ನಡೆಯಿಂದ ಆಕ್ರೋಶಗೊಂಡಿದ್ದು ಕಾನೂನಿನ ಮೂಲಕ ಹೋರಾಟ ನಡೆಸಲು ಚಿಂತನೆ ನಡೆಸುತ್ತಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.