ತುಮಕೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ಸಂಭವಿಸಿದ್ದು ತುಮಕೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಪತಿ ಪತ್ನಿಯ ನಡುವೆ ಗಲಾಟೆ ಶುರುವಾಗಿದೆ ಗಲಾಟೆ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಪತಿ ಪತ್ನಿಯನ್ನು ಭೀಕರವಾಗಿ ಹೊಂದಿದ್ದಲ್ಲದೆ ದೇಹದ ಅಂಗಾಂಗಗಳನ್ನು ಕತ್ತರಿಸಿ ಭೀಕರವಾಗಿ ಕೊಲೆ ಮಾಡಿದ್ದಾನೆ.
ಹೌದು ಈ ಒಂದು ದುರ್ಘಟನೆ ತುಮಕೂರಿನ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪ (32), ಮೃತ ದುರ್ದೈವಿ. ಹುಲಿಯೂರುದುರ್ಗ ಬಳಿಯ ಸುಗ್ಗನಹಳ್ಳಿ ನಿವಾಸಿಯಾಗಿದ್ದ ಶಿವರಾಮ್ ಎಂಬಾತನೇ ಕೃತ್ಯ ಎಸಗಿದ್ದಾನೆ. ಆರೋಪಿಯು ಪತ್ನಿಯ ಕತ್ತು ಹಾಗೂ ದೇಹದ ಇತರ ಅಂಗಾಂಗಗಳನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾನೆ.
ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಶಿವರಾಮ್ನನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಆರೋಪಿ ಶಿವರಾಮ್ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪ ಎಂಬವರನ್ನು ಮದುವೆಯಾಗಿದ್ದ. ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ ಹಾಗೂ 8 ವರ್ಷದ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದ. ಮರದ ಮಿಲ್ಲೊಂದರಲ್ಲಿ ಹೆಲ್ಪರ್ ಆಗಿ ಕೆಲಸ ಮಾಡುತ್ತಿದ್ದ.
ಕ್ಷುಲ್ಲಕ ಕಾರಣಕ್ಕೆ ಪತಿ ಹಾಗೂ ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗಿದೆ.ಸೋಮವಾರ ರಾತ್ರಿ ಕೂಡ ಇಬ್ಬರ ಮಧ್ಯೆ ಗಲಾಟೆ ನಡೆದಿತ್ತು. ಇದೇ ವೇಳೆ ಶಿವರಾಮ್ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ತಾವು ವಾಸವಿದ್ದ ಅಡುಗೆ ಮನೆಯಲ್ಲೇ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗ ಕತ್ತರಿಸಿ ಕೊಲೆ ಮಾಡಿದ್ದಾನೆ.