ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘೋಷಣೆ ಕೂಗಿದ್ದು ದೃಢ ಎಂದು FSL ವರದಿಯಲ್ಲಿ ಬಹಿರಂಗವಾಗಿದೆ.
‘ಜಾತಿ ಗಣತಿ’ ವರದಿಯ ಸಲ್ಲಿಕೆ ಬಗ್ಗೆ ನೈಜ್ಯತೆ ಪ್ರಶ್ನಿಸಿದ ಹೈಕೋರ್ಟ್ | Caste Census Report
ಕಳೆದ ಕೆಲವು ದಿನಗಳ ಹಿಂದೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ದಾಖಲಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಹಾಕಿದ್ದರು.ನಾಸೀರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವ ಮಾಹಿತಿ ಇದೀಗ ಬಹಿರಂಗವಾಗಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ : ‘ಕೇಂದ್ರ ತನಿಖಾ’ ತಂಡಗಳಿಂದ ತೀವ್ರಗೊಂಡ ಶೋಧ
FSL ಪರಿಶೀಲನೆ ವೇಳೆ ಆಡಿಯೋ ಮತ್ತು ವಿಡಿಯೋ ಎಡಿಟ್ ಮಾಡಿಲ್ಲ. FSL ವರದಿ ಅನ್ವಯ ಪೊಲೀಸರು ಈಗ ತನಿಖೆಯನ್ನು ಚುರುಕುಗೊಳಿಸುತ್ತಿದ್ದು, ವಶಕ್ಕೆ ಪಡೆದಿದ್ದ ಅನುಮಾನಾಸ್ಪದ ವ್ಯಕ್ತಿಗಳ ವಾಯ್ಸ್ ಗಳನ್ನು ರವಾನೆ ಮಾಡಲಾಗಿತ್ತು.ಪೊಲೀಸರ ತನಿಖೆಯ ವೇಳೆ ಅನುಮಾನಿತ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿತ್ತು.
ಸೇವಾ ಶುಲ್ಕವನ್ನು ಪಾವತಿಸದ ಕಾರಣ ಗೂಗಲ್ ಪ್ಲೇ ಸ್ಟೋರ್ನಿಂದ ಬಹು ಭಾರತೀಯ ಅಪ್ಲಿಕೇಶನ್ಗಳು ‘ಕಣ್ಮರೆ’
ಅನುಮಾನಿತರ ಪೈಕಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.ಎಫ್ ಎಸ್ ಎಲ್ ನಿಂದ ವಾಯ್ಸ್ ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ವಾಯ್ಸ್ ಮ್ಯಾಚ್ ಆದ ಕೂಡಲೇ ಅಧಿಕೃತವಾಗಿ ಬಂಧನ ಮಾಡಲು ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.