ತುಮಕೂರು : ಇತ್ತೀಚಿಗೆ ಎಲ್ಲೆಡೆ ಬೀದಿ ನಾಯಿಗಳ ಹಾಗೂ ಹುಚ್ಚು ನಾಯಿಗಳ ಹಾವಳಿ ಹೆಚ್ಚಾಗಿದೆ. ಇದೀಗ ತುಮಕೂರು ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಹೆಣ್ಣು ಮಗುವಿನ ಮೇಲೆ ಬೀದಿ ನಾಯಿ ದಾಳಿ ಮಾಡಿದೆ ಪರಿಣಾಮ ಮಗುವಿನ ಎಡಗಣ್ಣಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ.
ತುಮಕೂರು ತಾಲೂಕಿನ ಹೆಗ್ಗೆರೆಯಲ್ಲಿ ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿ ನಾಯಿ ದಾಳಿ ಮಾಡಿದೆ. ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ನಾಯಿ ದಾಳಿ ಮಾಡಿದೆ. ಹನಿಜಾ ಕಾನಂ ಎನ್ನುವ ಎರಡು ವರ್ಷದ ಹೆಣ್ಣು ಮಗುವಿನ ಮೇಲೆ ಬೀದಿ ನಾಯಿ ದಾಳಿ ಮಾಡಿದೆ. ಮಗುವಿನ ಕಣ್ಣು, ತಲೆ ಭಾಗಕ್ಕೆ ಬೀದಿ ನಾಯಿ ಕಚ್ಚಿದೆ.
ಹೆಣ್ಣು ಮಗುವಿಗೆ ಎಡಗಣ್ಣಿಗೆ ಗಂಭೀರವಾದ ಗಾಯವಾಗಿದೆ. ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೀದಿ ನಾಯಿಗಳ ಹಾವಳಿಗೆ ಹೆಗ್ಗೆರೆ ಗ್ರಾಮಸ್ಥರು ರೋಸಿ ಹೋಗಿದ್ದಾರೆ. ಅಧಿಕಾರಿಗಳಿಗೆ ಎಷ್ಟೇ ಹೇಳಿದರೂ ಕೂಡ ಬೀದಿ ನಾಯಿಗಳ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.