ನವದೆಹಲಿ : ನಿನ್ನೆ ಲೋಕಸಭೆ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಗದ್ದುಗೆ ಇರುವ ಸಂಭ್ರಮದಲ್ಲಿದ್ದರೆ, ಇತ್ತ ರಾಜಧಾನಿ ದೆಹಲಿಯಲ್ಲಿರುವ ಬಿಜೆಪಿ ಕಚೇರಿ ಎದುರು ವ್ಯಕ್ತಿಯೊಬ್ಬರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಹೌದು ರಾಜಧಾನಿ ದೆಹಲಿಯಲ್ಲಿರುವ ಬಿಜೆಪಿ ಕಚೇರಿ ಎದುರು ವ್ಯಕ್ತಿಯೊಬ್ಬರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಸಂಜೆ ವೇಳೆಗೆ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ವ್ಯಕ್ತಿಯೊಬ್ಬರು ಈ ಕೃತ್ಯಕ್ಕೆ ಕೈ ಹಾಕಿದ್ದಾರೆ. ಸೀಮೆ ಎಣ್ಣೆಯನ್ನು ಮೈ ಮೇಲೆ ಸುರಿದು ಕೊಳ್ಳುವುದನ್ನು ಗಮನಿಸಿದ ಪೊಲೀಸರು ಕೂಡಲೇ ಆತನನ್ನು ವಶಕ್ಕೆ ಪಡೆದು, ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ್ದಾರೆ.