ಕೆಎನ್ಎನ್ಡಿಜಿಟಲ್ ಡೆಸ್ಕ್ : 2ನೇ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅದ್ರಂತೆ, ಗಾಂಧಿನಗರದ ಹೆಲಿಪ್ಯಾಡ್ ಮೈದಾನದಲ್ಲಿ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ಇವರೊಂದಿಗೆ ಅವರ ಸರ್ಕಾರದ ಹಲವು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಭೂಪೇಂದ್ರ ಪಟೇಲ್ ಅವ್ರು ಅಹಮದಾಬಾದ್ ಜಿಲ್ಲೆಯ ಘಟ್ಲೋಡಿಯಾ ಕ್ಷೇತ್ರದ ಶಾಸಕರಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅವರ ನೇತೃತ್ವದಲ್ಲಿ 156 ಸ್ಥಾನಗಳೊಂದಿಗೆ ದಾಖಲೆಯ ಗೆಲುವು ಸಾಧಿಸಿದೆ.
ಮಧ್ಯ ಗುಜರಾತ್ನಿಂದ ಬಂದಿರುವ ಪಟೇಲ್, ಇಲ್ಲಿಯವರೆಗೆ ಎರಡು ಬಾರಿ ಶಾಸಕರಾಗಿದ್ದಾರೆ. ಇನ್ನು ಪಾಟಿದಾರ್ ಸಮುದಾಯದ ಕಡ್ವಾ ಸಮುದಾಯಕ್ಕೆ ಸೇರಿದ ಸಿಎಂ ಪಟೇಲ್ , 2017ರಲ್ಲಿ ಮೊದಲ ಬಾರಿಗೆ ಶಾಸಕರಾದರು. ಕ್ಲೀನ್ ಇಮೇಜ್ ಹೊಂದಿರುವ ನಾಯಕರಲ್ಲಿ ಒಬ್ಬರಾಗಿರುವ ಇವ್ರು ದಾದಾ ಎಂದೇ ಪ್ರಸಿದ್ಧಿಯಾಗಿದ್ದಾರೆ.
BIG NEWS : ʻಪ್ರತಿ ಕರೆನ್ಸಿಯ ಎದುರು ಭಾರತೀಯ ರೂಪಾಯಿ ಪ್ರಬಲವಾಗಿದೆʼ: ಕೇಂದ್ರ ನಿರ್ಮಲಾ ಸೀತಾರಾಮನ್
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನ