ರಾಯಚೂರು : ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಬೆಂಗಳೂರು ಮೂಲದ 6 ಮಂದಿ ನಕಲಿ ಪತ್ರಕರ್ತರನ್ನು ಪೊಲೀಸರು ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ನಲ್ಲಿ ನಡೆದಿದೆ.
BIGG NEWS : ವಿಶ್ವವಿಖ್ಯಾತ ದಸರಾ ಮಹೋತ್ಸವ 2022 : ದಸರಾಗೆ 50ಕೋಟಿ ರೂ. ಖರ್ಚುಮಾಡಲು ತೀರ್ಮಾನ
ಬಂಧಿತ ನಕಲಿ ಪತ್ರಕರ್ತರು ಯೂಟ್ಯೂಬ್ ಚಾನಲ್ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು.ರಾಜು ಬಿ, ನಾಗರಾಜ ಸಿ, ಪ್ರದೀಪಗೌಡ, ಅರ್ಪಿತಾ, ಮಹಾದೇವಿ, ಮೇಘ ಬಂಧಿತ ನಕಲಿ ಪತ್ರಕರ್ತರು.
ಮುದಗಲ್ ನ ಅಕ್ಕಿ ವ್ಯಾಪಾರಿ ವಿರೇಶ ಎನ್ನುವವರ ಅಂಗಡಿಗೆ ನುಗ್ಗಿ ಅವರಿಗೆ ಬ್ಲ್ಯಾಕ್ಮೇಲ್ ಮಾಡಿದ್ದರು ಎನ್ನುವ ಆರೋಪ ಕೇಳಿಬಂದಿದ್ದು, ಸುದ್ದಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿ 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಅಕ್ಕಿ ಮಾರಾಟಗಾರ ವಿರೇಶ್ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರು ಆಧರಿಸಿ ಪೊಲೀಸರು ನಕಲಿ ಪತ್ರಕರ್ತರನ್ನು ಬಂಧಿಸಿದ್ದಾರೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.