ಮೈಸೂರು : ಮುಡಾ ಹಗರಣವನ್ನು ಬಯಲು ಮಾಡಿದ್ದ ಆರ್ ಟಿಐ ಕಾರ್ಯಕರ್ತ ಗಂಗಾರಾಜು ಮೇಲೆ ಹಲ್ಲೆಗೆ ಯತ್ನ ನಡೆದಿರುವ ಗಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಶ್ರೀರಂಗಪಟ್ಟಣ ಸಮೀಪ ನಾಲ್ವರು ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಗಂಗಾರಾಜು ಅವರು ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ.
ಕುಟುಂಬದವರ ಜೊತೆಗೆ ಮೈಸೂರಿಗೆ ಬರುವ ವೇಳೆ ಕಾರು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು ಗಂಗಾರಾಜು ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಎರಡು ಬೈಕ್ ಮೇಲೆ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ಪರಾರಿಯಾಗಿದ್ದಾರೆ ಎಂದು ಮೈಸೂರು ಪೊಲೀಸ್ ಆಯುಕ್ತರಿಗೆ ಗಂಗಾರಾಜು ದೂರು ಸಲ್ಲಿಸಿದ್ದಾರೆ.