ಬೆಂಗಳೂರು: ಬ್ರಿಟನ್ ರಾಣಿ ಎಲಿಜಬೆತ್ II ನಿಧನ ( Britain’s Queen Elizabeth II passes away ) ಹಿನ್ನಲೆಯಲ್ಲಿ ರಾಜ್ಯಾಧ್ಯಂತ ನಾಳೆ ಒಂದು ದಿನ ಶೋಕಾಚರಣೆ ( State mourning ) ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 08-09-2022ರಂದು ಬ್ರಿಟನ್ ರಾಣಿ ಎಲಿಜಬೆತ್ II ನಿಧನ ಹೊಂದಿರುತ್ತಾರೆ. ಅಗಲಿದ ಗಣ್ಯರ ಗೌರವಾರ್ಥವಾಗಿ ದಿನಾಂಕ 11-09-2022ರಂದು ಒಂದು ದಿನ ದೇಶಾದ್ಯಂತ ಶೋಕಾಚರಣೆ ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.
ಕಾಂಗ್ರೆಸ್ ತಾಕತ್ತು ದಮ್ಮು ಹಾನಗಲ್ ಉಪ ಚುನಾವಣೆಯಲ್ಲಿ ಜನರೇ ಬೊಮ್ಮಾಯಿಗೆ ತೋರಿಸಿದ್ದಾರೆ – ರಮೇಶ್ ಬಾಬು
ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ದಿನಾಂಕ 11-09-2022ರಂದು ಒಂದು ದಿನ ಶೋಕಾಚರಣೆಯನ್ನು ಆಚರಿಸಲಾಗುವುದು. ಈ ದಿನಾಂಕದಂದು ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ವಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜನವನ್ನು ಅರ್ಧ ಮಟ್ಟದಲ್ಲಿ ಹಾರಿಸುವುದು ಎಂದಿದ್ದಾರೆ.