Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಮೋತ್ತೇಜಕ, ಲೈಂಗಿಕ ಜೀವನವನ್ನು ಉತ್ತಮಗೊಳಿಸುವ 7 ಅದ್ಭುತ ಆಹಾರಗಳಿವು

03/05/2026 9:21 PM

ಸಂತೋಷದಾಯಕ ಲೈಂಗಿಕ ಜೀವನಕ್ಕೆ ‘ಫೋರ್‌ಪ್ಲೇ’ ಏಕೆ ಮುಖ್ಯ? ಇಲ್ಲಿವೆ ಪ್ರಮುಖ ಕಾರಣಗಳು

03/05/2026 9:18 PM

ಕಾರಿನ ಒಳಗಿನ ಕೆಟ್ಟ ವಾಸನೆಯಿಂದ ಮುಕ್ತಿ ಬೇಕೇ? ಈ 5 ಸುಲಭ ಉಪಾಯಗಳನ್ನು ಅನುಸರಿಸಿ!

03/05/2026 9:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘KSDL’ಗೆ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರಾನ್ ಭೇಟಿ, ಉತ್ಪಾದನಾ ವಿಧಾನ ವೀಕ್ಷಿಸಿ ಮೆಚ್ಚುಗೆ
KARNATAKA

‘KSDL’ಗೆ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರಾನ್ ಭೇಟಿ, ಉತ್ಪಾದನಾ ವಿಧಾನ ವೀಕ್ಷಿಸಿ ಮೆಚ್ಚುಗೆ

By kannadanewsnow0925/06/2025 7:05 PM

ಬೆಂಗಳೂರು: ಸುಮಾರು 23 ದೇಶಗಳಲ್ಲಿ ತನ್ನ ಉತ್ಕೃಷ್ಟ ಗುಣಮಟ್ಟದ ಉತ್ಪನ್ನಗಳ ಮಾರಾಟ ವ್ಯವಸ್ಥೆ ಹೊಂದಿರುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತಕ್ಕೆ (ಕೆಎಸ್ಡಿಎಲ್) ಭಾರತದಲ್ಲಿರುವ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರಾನ್ ಮತ್ತು ಕರ್ನಾಟಕ-ಕೇರಳ ವ್ಯಾಪ್ತಿಯಲ್ಲಿನ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಬುಧವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರಿಬ್ಬರೂ ಕೆಎಸ್ಡಿಎಲ್ ಇತಿಹಾಸ, ಕಾರ್ಯವಿಧಾನ, ಮಾರುಕಟ್ಟೆ ಜಾಲ, ಆದಾಯ, ಭವಿಷ್ಯದ ಯೋಜನೆಗಳ ಬಗ್ಗೆ ವಿವರವಾಗಿ ತಿಳಿದುಕೊಂಡರು.

ಕೆಎಸ್ಡಿಎಲ್ ಗೆ ಭೇಟಿ ನೀಡಿದ ಈ ಇಬ್ಬರು ಗಣ್ಯರನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬರಮಾಡಿಕೊಂಡರು. ಜತೆಯಲ್ಲಿ ಸಂಸ್ಥೆಯ ಅಧ್ಯಕ್ಷ ಸಿ ಎಸ್ ನಾಡಗೌಡ ಕೂಡ ಇದ್ದರು. ಈ ಸಂದರ್ಭದಲ್ಲಿ, ಕೆಎಸ್ಡಿಎಲ್ ಚರಿತ್ರೆಯನ್ನು ಕಟ್ಟಿಕೊಡುವ ಪ್ರಾತ್ಯಕ್ಷಿಕೆಯನ್ನು ಲಿಂಡಿ ಮತ್ತು ಅಯ್ಯರ್ ಇಬ್ಬರಿಗೂ ಪ್ರದರ್ಶಿಸಲಾಯಿತು. ಸಂಸ್ಥೆಯ ಉಗಮದ ಹಿನ್ನೆಲೆಯಲ್ಲಿ ಬ್ರಿಟನ್ನಿನ ಪಾತ್ರವಿರುವುದನ್ನು ಕೇಳಿ, ಇಬ್ಬರೂ ಅಚ್ಚರಿ ವ್ಯಕ್ತಪಡಿಸಿದರು. ಜತೆಯಲ್ಲೇ ಕೆಎಸ್ಡಿಎಲ್ ಉತ್ಪನ್ನಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು. ಲಿಂಡಿ ಮತ್ತು ಅಯ್ಯರ್ ಇಬ್ಬರೂ ಸಂಸ್ಥೆಯ ಉತ್ಪನ್ನಗಳ ತಯಾರಿಕೆ ವಿಧಾನವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಲಿಂಡಿ ಕ್ಯಾಮರಾನ್, ಭಾರತ ಮತ್ತು ಬ್ರಿಟನ್ ನಡುವೆ ಮುಕ್ತ ವಾಣಿಜ್ಯ ಒಪ್ಪಂದ ಏರ್ಪಟ್ಟಿರುವುದರಿಂದ ಎರಡೂ ದೇಶಗಳಿಗೂ ಸಾಕಷ್ಟು ಲಾಭವಾಗಲಿದೆ. ನಾವು ನಮ್ಮ ನಮ್ಮ ನೈಪುಣ್ಯಗಳನ್ನು ಪರಸ್ಪರರ ಹಿತಗಳಿಗೆ ಧಕ್ಕೆಯಾಗದಂತೆ ವಿನಿಮಯ ಮಾಡಿಕೊಳ್ಳಬೇಕು. ಈ ಒಡಂಬಡಿಕೆಯ ಲಾಭವು ಕೈಗಾರಿಕಾ ಬೆಳವಣಿಗೆ ಮತ್ತು ವಾಣಿಜ್ಯ ವಹಿವಾಟಿನಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕಕ್ಕೂ ಸಿಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ನೂರಾಎಂಟು ವರ್ಷಗಳ ಹಿಂದೆ, ಅಂದರೆ 20ನೇ ಶತಮಾನದ ಎರಡನೆಯ ದಶಕದಲ್ಲಿ ಮೈಸೂರು ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ತಮ್ಮ ಆಸ್ಥಾನದಿಂದ ಪರಿಣತರೊಬ್ಬರನ್ನು ಬ್ರಿಟನ್ನಿಗೆ ಕಳುಹಿಸಿ, ಸಾಬೂನು ತಯಾರಿಕೆ ತಂತ್ರಜ್ಞಾನದ ಪರಿಚಯ ಮಾಡಿಕೊಂಡರು. ಆಮೇಲೆ, ನಾಲ್ವಡಿ ಮತ್ತು ವಿಶ್ವೇಶ್ವರಯ್ಯನವರ ದೂರದೃಷ್ಟಿಯಿಂದ ಸ್ಥಾಪನೆಗೊಂಡ ಕೆಎಸ್ಡಿಎಲ್ ಉತ್ಕೃಷ್ಟ ಮಟ್ಟಕ್ಕೆ ಬೆಳೆದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಚಿವ ಪಾಟೀಲ ತಿಳಿಸಿದರು.

`ಕೆಎಸ್ಡಿಎಲ್ ಉತ್ಪನ್ನಗಳನ್ನು ಸದ್ಯಕ್ಕೆ 23 ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಯೂರೋಪಿಯನ್ ರಾಷ್ಟ್ರಗಳಿಗೂ ಮೈಸೂರು ಸ್ಯಾಂಡಲ್ ಸೋಪ್, ಶವರ್ ಜೆಲ್ ಮುಂತಾದ ಗುಣಮಟ್ಟದ ಉತ್ಪನ್ನಗಳನ್ನು ಮತ್ತಷ್ಟು ರವಾನಿಸಲಾಗುವುದು. ಇದಕ್ಕೆ ಬ್ರಿಟನ್ನಿನ ಸಹಕಾರವೂ ನಮಗೆ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಮಾರುಕಟ್ಟೆ ವಿಸ್ತರಣೆ ನಡೆಯುತ್ತಿದೆ’ ಎಂದು ತಿಳಿಸಿದರು.

ಸಂಸ್ಥೆಯು ಕಳೆದ ಸಾಲಿನಲ್ಲಿ 416 ಕೋಟಿ ರೂ. ಲಾಭ ಗಳಿಸಿದ್ದು, 2028ರ ವೇಳೆಗೆ ವಾರ್ಷಿಕ ವಹಿವಾಟನ್ನು 3,000 ಕೋಟಿ ರೂ.ಗಳಿಗೆ ಕೊಂಡೊಯ್ಯಲಾಗುವುದು. ಜತೆಗೆ ವಿಜಯಪುರದಲ್ಲಿ 50 ಎಕರೆ ವಿಸ್ತೀರ್ಣದಲ್ಲಿ ಉತ್ಪಾದನಾ ಘಟಕವನ್ನೂ ಆರಂಭಿಸಲಾಗುವುದು. ಸದ್ಯದಲ್ಲೇ ಸಂಸ್ಥೆಯ ವತಿಯಿಂದ ನಾನಾ ತರಹದ ಸುಗಂಧ ದ್ರವ್ಯಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದರು.

ಜೊತೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಮತ್ತು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಇದ್ದರು.

ಜೂ.28ಕ್ಕೆ ಸಿಇಟಿ ಸೀಟು‌ ಹಂಚಿಕೆ‌ ಮಂಥನ ಕಾರ್ಯಾಗಾರ: ಸಚಿವ ಡಾ.ಎಂ.ಸಿ.ಸುಧಾಕರ್

ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಪ್ಯಾಕೇಜ್ ಟೂರ್ ಪ್ರಾರಂಭಿಸಿದ KSRTC

Share. Facebook Twitter LinkedIn WhatsApp Email

Related Posts

ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್

03/05/2026 8:36 PM2 Mins Read

ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

03/05/2026 8:34 PM1 Min Read

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM1 Min Read
Recent News

ಕಾಮೋತ್ತೇಜಕ, ಲೈಂಗಿಕ ಜೀವನವನ್ನು ಉತ್ತಮಗೊಳಿಸುವ 7 ಅದ್ಭುತ ಆಹಾರಗಳಿವು

03/05/2026 9:21 PM

ಸಂತೋಷದಾಯಕ ಲೈಂಗಿಕ ಜೀವನಕ್ಕೆ ‘ಫೋರ್‌ಪ್ಲೇ’ ಏಕೆ ಮುಖ್ಯ? ಇಲ್ಲಿವೆ ಪ್ರಮುಖ ಕಾರಣಗಳು

03/05/2026 9:18 PM

ಕಾರಿನ ಒಳಗಿನ ಕೆಟ್ಟ ವಾಸನೆಯಿಂದ ಮುಕ್ತಿ ಬೇಕೇ? ಈ 5 ಸುಲಭ ಉಪಾಯಗಳನ್ನು ಅನುಸರಿಸಿ!

03/05/2026 9:09 PM

ಭಾರತದಲ್ಲಿ ಹೆಚ್ಚುತ್ತಿದೆ ‘ಸ್ಲೀಪ್ ಡಿವೋರ್ಸ್’ ಕ್ರೇಜ್: ದಂಪತಿಗಳು ಪ್ರತ್ಯೇಕವಾಗಿ ಮಲಗಲು ಬಯಸುತ್ತಿರುವುದೇಕೆ?

03/05/2026 9:01 PM
State News
KARNATAKA

ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್

By kannadanewsnow0903/05/2026 8:36 PM KARNATAKA 2 Mins Read

ಮಂಡ್ಯ : ಜಿಲ್ಲೆಯಲ್ಲಿನ ಪುಸ್ತಕದ ಮನೆಯೊಂದು ಜಿಲ್ಲೆ ಮತ್ತು ರಾಜ್ಯವನ್ನು ದಾಟಿ ರಾಷ್ಟ್ರದ ರಾಜಧಾನಿ ದೆಹಲಿವರೆವಿಗೂ ತಲುಪಿರುವುದು ಶ್ಲಾಘನೀಯ ಕಾರ್ಯವೆಂದು…

ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

03/05/2026 8:34 PM

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM

Watch Video: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಳೆನೀರು ತುಂಬಿದ್ದ ಬೊಲೆರೊ ವಾಹನ ಪಲ್ಟಿ: ಭಯಾನಕ ವೀಡಿಯೋ ಇಲ್ಲಿದೆ

03/05/2026 7:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.