ನವದೆಹಲಿ : ಜನಸಂಕಲ್ಪ ಯಾತ್ರೆಯನ್ನು ಮೊಟಕುಗೊಳಿಸಿ ಮಾಜಿ ಸಿಎಂ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಿದ್ದು, ದಿಢೀರ್ ನವದೆಹಲಿಗೆ ಹಾರಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಕೇಂದ್ರ ಚುನಾವಣಾ ಸಮಿತಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಬಂದಿದ್ದೇನೆ. ಇಂದು ಮೊದಲ ಸಭೆಯಲ್ಲಿ ಭಾಗಿಯಾಗಲಿದ್ದೇನೆ. ಪ್ರಮುಖ ಸಭೆಯಾಗಿರುವ ಹಿನ್ನಲೆ ಸಂಕಲ್ಪ ಯಾತ್ರೆಯಿಂದ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದರು. ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕ ಮಾಡಿದ್ದು, ಈ ಹಿನ್ನೆಲೆ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.ಇತ್ತೀಚೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಸುಳಿವು ನೀಡಿದ್ದರು. ಇದರ ನಡುವೆ ಯಡಿಯೂರಪ್ಪ ದೆಹಲಿಗೆ ತೆರಳಿರುವುದು ತೀವ್ರ ಕುತೂಹಲ ಮೂಡಿಸಿತ್ತು. ಆದರೆ ಇದೀಗ ಎಲ್ಲಾ ಗೊಂದಲಕ್ಕೆ ತೆರೆ ಬಿದ್ದಿದೆ.
ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಜನಸಂಕಲ್ಪ ಯಾತ್ರೆ ಶುರುಮಾಡಿದೆ. ಬಿಎಸ್ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭವಾಗಿದೆ. ಭಾರತ್ ಜೋಡೋ ಯಾತ್ರೆಗೆ ಟಕ್ಕರ್ ಕೊಡಲು ಬಿಜೆಪಿ ಜನಸಂಕಲ್ಪ ಯಾತ್ರೆ ಶುರುಮಾಡಿದೆ.