ಕೊಪ್ಪಳ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ನಮ್ಮದು ತಂದೆ-ಮಗನ ಸಂಬಂಧವಿದೆ. ಹೀಗಾಗಿ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
BREAKING NEWS: ರೇಣುಕಾಚಾರ್ಯ ಸಹೋದರರನ ಪುತ್ರ ಚಂದ್ರು ಸಾವು ಪ್ರಕರಣ; ತನಿಖೆ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ
ನಗರದಲ್ಲಿ ಮಾತನಾಡಿದ ಅವರು, ಬಿ.ಎಸ್ ಯಡಿಯೂರಪ್ಪ ನಮ್ಮ ಸರ್ವೋಚ್ಛ ನಾಯಕರು. ಅವರನ್ನು ಮುಂದಿಟ್ಟುಕೊಂಡೆ ಎಲ್ಲ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಅವರು ಆಗಮಿಸಿದ್ದಾರೆ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಅದು ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ. ಯಡಿಯೂರಪ್ಪ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲವೆಂಬ ಕಾರಣಕ್ಕೆ ಅವರು ಮುನಿಸಿಕೊಂಡಿರುವುದು ಶುದ್ಧ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.