ಬಿಹಾರ : ಬಿಹಾರ ಸ್ಟಾಫ್ ಸೆಲೆಕ್ಷನ್ ಕಮಿಷನ್ (BSSC) CGL ಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಆಕಾಂಕ್ಷಿಗಳ ಮೇಲೆ ಬಿಹಾರ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಪಟ್ನಾದ ಡಾಕ್ ಬಂಗಲೆ ಚೌರಾಹಾದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಆಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದರು. ಪೇಪರ್ ಸೋರಿಕೆಯ ವರದಿಗಳು ಸಾರ್ವಜನಿಕವಾಗಿ ಹೊರಹೊಮ್ಮಿದ ನಂತರ ಬಿಹಾರ ಸಿಬ್ಬಂದಿ ಆಯ್ಕೆ ಆಯೋಗದ (ಬಿಎಸ್ಎಸ್ಸಿ) ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬಿಹಾರ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
#WATCH | Patna: Bihar Police lathi-charge Bihar Staff Selection Commission (BSSC) aspirants who were protesting against the state govt over paper leak pic.twitter.com/25TuAlX9zo
— ANI (@ANI) January 4, 2023
ಪ್ರತಿಭಟನೆ ನಡೆಸುತ್ತಿದ್ದವರಲ್ಲಿ ಕೆಲವರು ಹಿಂಸಾಚಾರ ಮತ್ತು ವಿಧ್ವಂಸಕತೆ ನಡೆಸಲು ಮುಂದಾದರು. ಅವರನ್ನು ನಿಯಂತ್ರಿಸಲು ಲಾಠಿ ಚಾರ್ಜ್ ಮಾಡಬೇಕಾಯಿತು. ಅದರಲ್ಲಿ ಕೆಲವರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಎಂದು ಪಾಟ್ನಾದ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಎಂಎಸ್ ಖಾನ್ ಹೇಳಿದ್ದಾರೆ.
Bihar | They started violence and vandalism and to control it, (lathi-charge) was done. Some have been arrested. FIR will be registered against them: MS Khan, Special Executive Magistrate, Patna pic.twitter.com/u63RZP60i6
— ANI (@ANI) January 4, 2023
BIGG NEWS : ದೆಹಲಿಯ ಇಂಡಿಯಾ ಗೇಟ್ನಲ್ಲಿ ಬೀದಿಬದಿ ವ್ಯಾಪಾರಿಗಳ ನಡುವೆ ಗಲಾಟೆ : 5 ಭದ್ರತಾ ಸಿಬ್ಬಂದಿಗಳಿಗೆ ಗಾಯ