ಬೆಂಗಳೂರು : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರವಾಗಿ ಹೊಳಲ್ಕೆರೆ ಬಿಜೆಪಿ ಶಾಸಕ ಎಂ ಚಂದ್ರಪ್ಪ ಅವರ ಮಗ ರಘು ಚಂದನ್ ಪಕ್ಷೇತರವಾಗಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು ಆದರೆ ಅವರ ಮನವೊಲಿಕೆ ಇದೀಗ ಯಶಸ್ವಿ ಆಗಿದೆ ಎನ್ನಲಾಗಿತ್ತಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ವಿಚಾರವನ್ನು ಶಾಸಕ ಚಂದ್ರಪ್ಪ ಅವರ ಮಗ ರಘು ಚಂದನ್ ಕೈ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಚಂದ್ರಪ್ಪ ಮನವೊಲಿಸುವಲ್ಲಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿ ವೈ ವಿಜಯೇಂದ್ರ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಬಿ ಎಸ್ ಯಡಿಯೂರಪ್ಪರನ್ನು ಶಾಸಕ ಚಂದ್ರಪ್ಪ ಭೇಟಿಯಾಗಿದ್ದರು. ಗೋವಿಂದ ಕಾರಜೋಳ ಪರ ಕೆಲಸ ಮಾಡಲು ಚಂದ್ರಪ್ಪ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪುತ್ರ ರಘು ಚಂದನ್ ಇದೀಗ ಒಪ್ಪಿಕೊಂಡಿದ್ದಾರೆ ಪಕ್ಷೇತರರಾಗಿ ಸ್ಪರ್ಧಿಸಲು ರಘು ಚಂದನ್, ಚಿಂತನೆ ನಡೆಸಿದ್ದರು ಎನ್ನಲಾಗಿದೆ.
ಇವಿಎಂ – ವಿವಿಪ್ಯಾಟ್ ಕುರಿತು ಮತದಾನ ಸಿಬ್ಬಂದಿಗೆ ಮಾರ್ಗಸೂಚಿ ಬಿಡುಗಡೆ!
ಬೆಂಗಳೂರಲ್ಲಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಚಂದ್ರಪ್ಪ ಹೇಳಿಕೆ ನೀಡಿದ್ದು, ಯಡಿಯೂರಪ್ಪನವರು ನನ್ನ ಜೊತೆ ನಮ್ಮ ಬೆಂಬಲಿಗರ ಜೊತೆ ಮಾತಾಡಿದ್ದಾರೆ.ಅವರ ಮಾತಿಗೆ ಗೌರವ ಕೊಟ್ಟು ನನ್ನ ಮಗ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತಿಲ್ಲ ಎಂದು ಹೊಳಲ್ಕೆರೆ ಶಾಸಕ ಚಂದ್ರಪ್ಪ ಅವರು ಬಿಎಸ್ ಯಡಿಯೂರಪ್ಪ ಅವರ ಭೇಟಿ ನಂತರ ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದರು.