ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಇತರರ ವಿರುದ್ಧ ಕೇಳಿ ಬಂದಿದ್ದಂತ ಭ್ರಷ್ಟಾಚಾರ ಆರೋಪದಲ್ಲಿ ಲೋಕಾಯುಕ್ತದಿಂದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಕೆ ಮಾಡಲಾಗಿದೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ಸೇರಿದಂತೆ ಮತ್ತಿತರರ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಲೋಕಾಯುಕ್ತದಿಂದ ತನಿಖೆ ನಡೆಸಲಾಗಿತ್ತು. ಇಂದು ಲೋಕಾಯುಕ್ತ ಪೊಲೀಸರು ತನ್ನ ತನಿಖಾ ವರದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ.
ಬಿಡಿಎ ಅಪಾರ್ಟಮೆಂಟ್ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. 8.41 ಕೋಟಿ ಹಣ ನಕಲಿ ಕಂಪನಿಗಳ ಮೂಲಕ ವರ್ಗಾವಣೆ ಆರೋಪ ಮಾಡಲಾಗಿತ್ತು. ಬಿಎಸ್ ಯಡಿಯೂರಪ್ಪ ಮೊಮ್ಮಗ ಶಶಿಧರ್ ಮರಡಿ ಕಂಪನಿಗೆ ವರ್ಗಾವಣೆ ಮಾಡಲಾಗಿದೆ ಎಂಬುದಾಗಿ ಆರೋಪಿಸಲಾಗಿತ್ತು.
ಈ ಹಿನ್ನಲೆಯಲ್ಲಿ ಸಾಮಾಜಿಕ ಹೋರಾಟಗಾರ ಟಿ.ಜಿ ಅಬ್ರಾಹಂ ಅವರು ಖಾಸಗಿ ದೂರು ದಾಖಲಿಸಿದ್ದರು. ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಶಶಿಧರ ಮರಡಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ, ಎಸ್ ಟಿ ಸೋಮಶೇಖರ್, ಜಿಸಿ ಪ್ರಕಾಶ್, ಕೆ.ರವಿ, ವಿರೂಪಾಕ್ಷಪ್ಪ, ಯಮಕನಮರಡಿ ವಿರುದ್ಧ ದೂರು ದಾಖಲಾಗಿತ್ತು. ಈ ದೂರಿನ ಸಂಬಂಧ ಲೋಕಾಯುಕ್ತದಿಂದ ತನಿಖೆ ನಡೆಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆ ಮಾಡಲಾಗಿದೆ.
ಶಿವಮೊಗ್ಗ: ಉಳ್ಳೂರಲ್ಲಿ KSRTC ಬಸ್ ನಿಲ್ಲಿಸುವಂತೆ ‘ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆ’ ಮನವಿ
BREAKING: ಅತ್ಯಾಚಾರ ಪ್ರಕರಣದಲ್ಲಿ ಲಲಿತ್ ಮೋದಿ ಸಹೋದರ ಸಮೀರ್ ಮೋದಿ ಅರೆಸ್ಟ್ | Samir Modi Arrest