ನವದೆಹಲಿ:2047 ರ ವೇಳೆಗೆ ಕನಿಷ್ಠ 100 ಗಿಗಾವ್ಯಾಟ್ ಪರಮಾಣು ಸಾಮರ್ಥ್ಯದ ಅಭಿವೃದ್ಧಿ ಅತ್ಯಗತ್ಯ. 20,000 ಕೋಟಿ ರೂ.ಗಳ ವೆಚ್ಚದಲ್ಲಿ ಸಣ್ಣ ಮಾಡ್ಯುಲರ್ ರಿಯಾಕ್ಟರ್ ಗಳ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಪರಮಾಣು ಶಕ್ತಿ ಮಿಷನ್ ಸ್ಥಾಪಿಸಲಾಗುವುದು ಎಂದು ನಿರ್ಮಲಾ ಸೀತಾರಾಮನಗ ಹೇಳಿದ್ದಾರೆ.
2033 ರ ವೇಳೆಗೆ ಐದು ಸಣ್ಣ ಮಾಡ್ಯುಲರ್ ರಿಯಾಕ್ಟರ್ ಗಳು ಕಾರ್ಯನಿರ್ವಹಿಸಲಿವೆ. ಖಾಸಗಿ ವಲಯದ ಸಕ್ರಿಯ ಸಹಭಾಗಿತ್ವಕ್ಕಾಗಿ, ಪರಮಾಣು ಶಕ್ತಿ ಕಾಯ್ದೆ ಮತ್ತು ಪರಮಾಣು ಶಕ್ತಿಗೆ ನಾಗರಿಕ ಹೊಣೆಗಾರಿಕೆ ಕಾಯ್ದೆಗೆ ತಿದ್ದುಪಡಿಗಳನ್ನು ಕೈಗೊಳ್ಳಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು