ನವದೆಹಲಿ: ಸದ್ಯ ವಿತ್ತ ಸಚಿವೆ ನಿರ್ಮಲ ಸೀತರಾಮನ್ ಅವರು ಮಧ್ಯಂತರ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಈ ಬಾರಿಯ ಬಜೆಟ್ ಎಲ್ಲರ ಗಮನ ನೆಟ್ಟಿದೆ. ಈ ನಡುವೆ ಇಂದು ನಿರ್ಮಲ ಸೀತಾರಾಮನ್ ಅವರು ಮಂಡನೆ ಮಾಡುತ್ತಿರುವ ಬಜೆಟ್ನಲ್ಲಿ “ನಾವು ಗರೀಬ್, ಮಹಿಲಾಯೆನ್, ಯುವ ಮತ್ತು ಅನ್ನದಾತನ ಬಗ್ಗೆ ಗಮನ ಹರಿಸಬೇಕಾಗಿದೆ; ಅವರ ಅಗತ್ಯತೆಗಳು ಮತ್ತು ಆಕಾಂಕ್ಷೆಗಳು ನಮ್ಮ ಅತ್ಯುನ್ನತ ಆದ್ಯತೆಗಳಾಗಿವೆ” ಎಂದು ಹೇಳಿದರು.
ಇದೇ ವೇಳೆ ಅವರು ಮಾತನಾಡುತ್ತ ಕಳೆದ 10 ವರ್ಷಗಳಲ್ಲಿ 25 ಕೋಟಿ ಜನರು ಬಹು ಆಯಾಮದ ಬಡತನದಿಂದ ಮುಕ್ತರಾಗಿದ್ದಾರೆ: ಅಂತ ತಿಳಿಸಿದರು. ಇನ್ನೂ ಬಡವರು, ಮಹಿಳೆಯರು, ಯುವಕರು ಮತ್ತು ರೈತರು ನಮ್ಮ ಸರ್ಕಾರಕ್ಕೆ ನಾಲ್ಕು ಜಾತಿಗಳಾಗಿವೆ ಅಂತ ಹೇಳಿದರು. “ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ, 54 ಲಕ್ಷ ಯುವಕರಿಗೆ ಕೌಶಲ್ಯ ಮತ್ತು ಮರು ಕೌಶಲ್ಯ ನೀಡಿದೆ ಮತ್ತು 3000 ಹೊಸ ಐಟಿಐಗಳನ್ನು ಸ್ಥಾಪಿಸಿದೆ. 7 ಐಐಟಿಗಳು, 16 ಐಐಐಟಿಗಳು, 7 ಐಐಎಂಗಳು, 15 ಏಮ್ಸ್ ಮತ್ತು 390 ವಿಶ್ವವಿದ್ಯಾಲಯಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಸಾಂಸ್ಥಿಕ ಉನ್ನತ ಶಿಕ್ಷಣವನ್ನು ಸ್ಥಾಪಿಸಲಾಗಿದೆ ಅಂತ ತಿಳಿಸಿದರು.
ಕಳೆದ 10 ವರ್ಷಗಳಲ್ಲಿ ಭಾರತೀಯ ಆರ್ಥಿಕತೆಯು ಆಳವಾದ ಸಕಾರಾತ್ಮಕ ಪರಿವರ್ತನೆಗೆ ಸಾಕ್ಷಿಯಾಗಿದೆ, ಭಾರತದ ಜನರು ಭರವಸೆ ಮತ್ತು ಆಶಾವಾದದೊಂದಿಗೆ ಭವಿಷ್ಯವನ್ನು ಎದುರು ನೋಡುತ್ತಿದ್ದಾರೆ. ಜನರ ಆಶೀರ್ವಾದದಿಂದ, 2014 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ, ದೇಶವು ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮಂತ್ರದೊಂದಿಗೆ ಅಗಾಧ ಸವಾಲುಗಳನ್ನು ಎದುರಿಸುತ್ತಿತ್ತು. ಸರ್ಕಾರವು ಆ ಸವಾಲುಗಳನ್ನು ಸರಿಯಾದ ಶ್ರದ್ಧೆಯಿಂದ ಜಯಿಸಿತು ಅಂತ ಹೇಳಿದರು.