ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2025-26 ) ಅನ್ನು ಮಂಡಿಸಿದ್ದು, ಹಲವು ಮಹತ್ವದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ಕೃಷಿ
28. ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು, ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಪ್ರಸಕ್ತ ಸಾಲಿನಲ್ಲಿ, ಈ ಯೋಜನೆಯಡಿ 10 ಹವಾಮಾನ ವಲಯಗಳಲ್ಲಿ ಕೃಷಿ ಇಲಾಖೆಯ ಆಧೀನದ ಕ್ಷೇತ್ರಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳನ್ನು ಅಭಿವೃದ್ಧಿಪಡಿಸಿ, ಪದ್ಧತಿಯನ್ನು ಆಳವಡಿಸಿಕೊಳ್ಳಲು ರೈತರಿಗೆ ಪ್ರಚುರಪಡಿಸಲಾಗುವುದು.
29. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂ. ಅನುದಾನ ಕಲ್ಪಿಸಲಾಗುವುದು.
30. ಕೃಷಿ ಬೆಳೆಗಳಲ್ಲಿ ನೀರನ್ನು ಸಮರ್ಥ ಬಳಕೆ ಮಾಡಿ. ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಆಳವಡಿಕೆಗೆ 440 блем مه. ಸಹಾಯಧನವನ್ನು ಒದಗಿಸಲಾಗುವುದು.
31. ತೊಗರಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಆಳವಡಿಕೆ, ಕ್ಷೇತ್ರ ವಿಸ್ತರಣೆ ಮತ್ತು ತೊಗರಿಯನ್ನು ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸುವುದರ ಮೂಲಕ ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸಲು ಉದ್ದೇಶಿಸಿದೆ. ಈ ಮೂಲಕ ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು 88 ಕೋಟಿ ರೂ. ಒದಗಿಸಲಾಗುವುದು.
32. ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್‌ಕ್ಯೂಬೇಷನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು.
33. ಕೃಷಿ ಭಾಗ್ಯ ಯೋಜನೆಯಡಿ ಮೂರು ಲಕ್ಷಕ್ಕಿಂತ ಅಧಿಕ ಕೃಷಿ ಹೊಂಡಗಳನ್ನು ನಿರ್ಮಿಸಿ ಮಳೆಯಾಶ್ರಿತ ಕೃಷಿ ಪ್ರದೇಶದ ಬೆಳೆಗಳಿಗೆ ರಕ್ಷಣಾತ್ಮಕ ನೀರಾವರಿ ಒದಗಿಸುವುದರೊಂದಿಗೆ ರೈತರ ಬೆಳೆಗಳ ಉತ್ಪಾದಕತೆ ಹಾಗೂ ಆದಾಯವನ್ನು ಹೆಚ್ಚಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ ಕೃಷಿ ಹೊಂಡಗಳನ್ನು ನಿರ್ಮಿಸಲಾಗುವುದು. 12,000
34. ಜಾಗತಿಕ ಮಟ್ಟದಲ್ಲಿ ಡಿಜಿಟಲ್, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರದಲ್ಲಿ ಆಗುತ್ತಿರುವ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಆಳವಡಿಸಿ, ಡಿಜಿಟಲ್ ಕೃಷಿ ಸೇವೆಗಳ ಕೇಂದ್ರವನ್ನು ಸ್ಥಾಪಿಸಲಾಗುವುದು. ಈ ಕೇಂದ್ರವು ರೈತರಿಗೆ ಮತ್ತು ನೀತಿ ನಿರೂಪಕರಿಗೆ ಬೆಳೆಗಳ ಕುರಿತು ನಿಖರವಾದ ತೀರ್ಮಾನವನ್ನು ಕೈಗೊಂಡು ಬೆಳೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ.
35. ರಾಜ್ಯದಲ್ಲಿ ಚಾಲ್ತಿಯಿರುವ ಹವಾಮಾನ ವಲಯಗಳ ವರ್ಗೀಕರಣ ಬಹಳ ವರ್ಷಗಳ ಹಿಂದೆ ಗುರುತಿಸಲಾಗಿರುವುದರಿಂದ ಹಾಗೂ ಇತ್ತೀಚಿನ ವರ್ಷಗಳ ನೈಸರ್ಗಿಕ ವೈಪರೀತ್ಯಗಳ ಬದಲಾವಣೆಯಿಂದ ಹವಾಮಾನ ವಲಯಗಳನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿಯನ್ನು ರಚಿಸಲಾಗುವುದು.
36. ಕರ್ನಾಟಕ ರಾಜ್ಯದ ಸಾಗುವಳಿ ಪ್ರದೇಶದ ಶೇ.64ರಷ್ಟು ಪ್ರದೇಶವು ಮಳೆಯಾಶ್ರಿತ ಪ್ರದೇಶವಾಗಿದ್ದು. ಮಳೆಯಾಶ್ರಿತ ಕೃಷಿಯನ್ನು ಜೀವನಾಧಾರವಾಗಿಸಿ ಸುಸ್ಥಿರವನ್ನಾಗಿಸಲು ಹಾಗೂ ರೈತರ ಜೀವನೋಪಾಯವನ್ನು ಸುಧಾರಿಸಲು ‘ಸಮಗ್ರ ಮಳೆಯಾಶ್ರಿತ ಕೃಷಿ ನೀತಿ ‘ಯನ್ನು ಅನುಷ್ಠಾನಕ್ಕೆ ತರಲಾಗುವುದು.
37. ರೈತರಿಗೆ ಮಣ್ಣು ಪರೀಕ್ಷೆ ಹಾಗೂ ಅವರು ಬಳಸುವ ಪರಿಕರಗಳಾದ ರಸಗೊಬ್ಬರ, ಬಿತ್ತನೆ ಬೀಜ, ಸಸ್ಯ ಸಂರಕ್ಷಣಾ ಔಷಧಿ, ಜೈವಿಕ ಗೊಬ್ಬರ ಇತ್ಯಾದಿಗಳ ಗುಣಮಟ್ಟವನ್ನು ಪರೀಕ್ಷಿಸಲು ಇಲಾಖೆಯಡಿ ಇರುವ 58 ಪ್ರಯೋಗಾಲಯಗಳನ್ನು ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಬಲವರ್ಧನೆಗೊಳಿಸಲಾಗುವುದು.
38. ಸುಸ್ಥಿರ ಸಾವಯವ ಕೃಷಿಯನ್ನು ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸಿ, ರೈತರ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಸಾವಯವ ಪ್ರಮಾಣೀಕರಣ ವ್ಯವಸ್ಥೆ ಕಲ್ಪಿಸಲಾಗುವುದು.
39. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಒಟ್ಟಾರೆ 3,000 ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆಯನ್ನು ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ ಜಾರಿಗೊಳಿಸಲಾಗುವುದು.
40. ಜೈವಿಕ ಕೃಷಿ ಪರಿಕರ ಸ್ಟಾರ್ಟ್-ಅಪ್‌ಗಳು (Agri Start-up) ಉತ್ಪಾದಿಸುವ ಜೈವಿಕ ಪರಿಕರಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸೂಕ್ತ ದರದಲ್ಲಿ ಮಾರಾಟ ಮಾಡಲು ಉತ್ತೇಜಿಸಲಾಗುವುದು.
41. ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಯೋಜನೆಯಡಿ ಈವರೆಗೆ ಒಟ್ಟಾರೆ 12.90 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭೂ-ಸಂಪನ್ಮೂಲ ಸಮೀಕ್ಷೆ ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಭೂ-ಸಂಪನ್ಮೂಲ ಸಮೀಕ್ಷೆ ಆಧಾರದ ಮೇಲೆ ರೈತರು ಸೂಕ್ತವಾದ ಬೆಳೆಗಳನ್ನು ಬೆಳೆಯಲು, ಆಗತ್ಯವಿರುವ ರಾಸಾಯನಿಕ ಗೊಬ್ಬರ ಹಾಗೂ ಪೋಷಕಾಂಶಗಳನ್ನು ಬಳಸಿ ಬೆಳೆಗಳ ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹಿಸಲಾಗುವುದು.
42. ಮಂಡ್ಯ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಈಗಾಗಲೇ ಅನುಮೋದನೆ ನೀಡಿದ್ದು, ಮೂಲಸೌಕರ್ಯ ಕಲ್ಪಿಸಲು 25 ಕೋಟಿ ರೂ. ಒದಗಿಸಿ, ಪ್ರಸಕ್ತ ಸಾಲಿನಲ್ಲಿ ತರಗತಿಗಳನ್ನು ಆರಂಭಿಸಲಾಗುವುದು.
43. ಬರ ಮತ್ತು ರೋಗ ನಿರೋಧಕ ಲಕ್ಷಣಗಳ ಸಂಶೋಧನೆ ಕೈಗೊಂಡು ಬೆಳೆಗಳ ಉತ್ತಮ ಅಭಿವೃದ್ಧಿಪಡಿಸಲು ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್ (Phenotyping) ಸೌಲಭ್ಯ ಕಲ್ಪಿಸಲಾಗುವುದು.
44. ಸಾವಯವ ಉತ್ಪನ್ನಗಳು ಮತ್ತು ಸಿರಿಧಾನ್ಯಗಳ ಬೇಡಿಕೆ ಮತ್ತು ಪೂರೈಕೆಗಳ ಅಂತರವನ್ನು ಸರಿದೂಗಿಸಲು ಹಾಗೂ ರೈತರಿಗೆ ಸೂಕ್ತ ಮಾರುಕಟ್ಟೆಯನ್ನು ಕಲ್ಪಿಸುವ ಉದ್ದೇಶದಿಂದ 20 ಕೋಟಿ ರೂ. ಮೊತ್ತದಲ್ಲಿ ‘ಸಾವಯವ ಮತ್ತು ಸಿರಿಧಾನ್ಯಗಳ ಹಬ್’ ಅನ್ನು ಸ್ಥಾಪಿಸಲಾಗುವುದು.
45. ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು.
46. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಹೊಸ ಕೃಷಿ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಕೊಳ್ಳಲಾಗುವುದು.
47. ರೈತರಿಗೆ ಹೆಚ್ಚಿನ ಆದಾಯ ಒದಗಿಸುವಲ್ಲಿ ತೋಟಗಾರಿಕಾ ಬೆಳೆಗಳ ಕೊಡುಗೆ ಮಹತ್ವದ್ದಾಗಿದೆ. ಇತ್ತೀಚಿನ ಬೆಳೆ ಪದ್ಧತಿ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ ತಂತ್ರಜ್ಞಾನದಲ್ಲಾದ ಆಧುನೀಕರಣದ ಆನುಕೂಲವನ್ನು ಬೆಳೆಗಾರರಿಗೆ ತಲುಪಿಸುವ ಉದ್ದೇಶದಿಂದ ಸಮಗ್ರ Алмытово ಅಭಿವೃದ್ಧಿ ಯೋಜನೆ-2 ಅನ್ನು ಜಾರಿಗೊಳಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗೆ 95 ಕೋಟಿ ರೂ. ಅನುದಾನ ಒದಗಿಸಿದೆ.
48. ತೋಟಗಾರಿಕಾ ಬೆಳೆಗಳ ವಿಸ್ತೀರ್ಣ, ಉತ್ಪಾದನೆ, ಬೆಳೆಗಳ ಆರೋಗ್ಯ. ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ನೈಜ ಸಮಯದ (Real Time) ಆಧಾರದ ಮೇಲೆ ರೈತರಿಗೆ మాపితి ಒದಗಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ, ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಸ್ಪೇಸ್ ಸೈನ್ಸ್ ಟೆಕ್ನಾಲಜಿ ಮತ್ತು ಖಾಸಗಿ ಸಹಯೋಗದಲ್ಲಿ ಜ್ಞಾನ ಕೋಶ ಸ್ಥಾಪಿಸಲಾಗುವುದು.
49. ರಾಜ್ಯದ 20 GI ಟ್ಯಾಗ್ ಹೊಂದಿರುವ ಬೆಳೆಗಳು ಹಾಗೂ ಇತರೆ ದೇಸಿ ತಳಿಗಳು ಕಣ್ಮರೆಯಾಗಿ ನಶಿಸಿ ಹೋಗುವುದನ್ನು ತಪ್ಪಿಸಲು ದೇಶಿ ತಳಿಗಳ ಬೀಜ ಬ್ಯಾಂಕ್ ಸ್ಥಾಪಿಸಲಾಗುವುದು.
50. ಬ್ಯಾಡಗಿ ಮೆಣಸಿನಕಾಯಿ ತಳಿಯ ಸಂರಕ್ಷಣೆ ಮತ್ತು ಎಲೆ ಮುಟುರು ರೋಗ, ತ್ರಿಪ್ಸ್ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ಕೈಗೊಳ್ಳಲಾಗುವುದು.
51. ತೋಟಗಾರಿಕೆ ಇಲಾಖೆಯ ಆಧೀನದ ಆಯ್ದ ಕ್ಷೇತ್ರಗಳು ಮತ್ತು ನರ್ಸರಿಗಳಡಿ ಸಾರ್ವಜನಿಕ-ಖಾಸಗಿ ಸಹಯೋಗದೊಂದಿಗೆ ಹೂ-ಕೃಷಿ, ಆಲಂಕಾರಿಕ ಸಸ್ಯಗಳು, ಔಷಧೀಯ ಸಸ್ಯಗಳನ್ನು ಬೆಳೆಸಲು ಹಾಗೂ ತೋಟಗಾರಿಕಾ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಾರ್ಯಕ್ರಮವನ್ನು ರೂಪಿಸಲಾಗುವುದು.
52. ಗದಗ ಜಿಲ್ಲೆಯ ಡಂಬಳದಲ್ಲಿ ತೋಟಗಾರಿಕಾ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಕೊಳ್ಳಲಾಗುವುದು.
53. ತೋಟಗಾರಿಕಾ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ ಸುಮಾರು 52,000 ಫಲಾನುಭವಿಗಳಿಗೆ 426 ಕೋಟಿ ರೂ. ಸಹಾಯ ಧನವನ್ನು ಒದಗಿಸಲಾಗುವುದು.
54. ಮಲೆನಾಡು ಜಿಲ್ಲೆಗಳಲ್ಲಿ ಎಲೆ ಚುಕ್ಕೆ ರೋಗದ ಬಾಧೆಗೆ ತುತ್ತಾಗಿ 2 ಲಕ್ಷಕ್ಕಿಂತ ಅಧಿಕ ಅಡಿಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಈ ರೋಗ ನಿಯಂತ್ರಿಸಲು ಸಸ್ಯ ಸಂರಕ್ಷಣಾ ಕ್ರಮಗಳಿಗಾಗಿ 62 ಕೋಟಿ ರೂ. ಒದಗಿಸಲಾಗಿದೆ.
55. ತೆಂಗು ಬೆಳೆಯುವ ಪ್ರದೇಶಗಳಲ್ಲಿ ಕಪ್ಪು ತಲೆ ಹುಳುವಿನ ಬಾಧೆಯ ಕುರಿತು ವೈಜ್ಞಾನಿಕ ಸಮೀಕ್ಷೆ ನಡೆಸಿ. ಇದರ ಆಧಾರದ ಮೇಲೆ ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಲಾಗುವುದು.
ರೇಷ್ಮೆ
56. ಅಂತಾರಾಷ್ಟ್ರೀಯ ದರ್ಜೆಯ ದ್ವಿತಳಿ ಕಚ್ಚಾ ರೇಷ್ಮೆಯ ದೇಶೀಯ ಬೇಡಿಕೆಯನ್ನು ಪೂರೈಸಲು ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್ ಘಟಕಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸಲಾಗುವುದು.
57. ರಾಮನಗರ ಮತ್ತು ಶಿಡ್ಲಘಟ್ಟ ಹೈ-ಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯ ಮೊದಲನೇ ಹಂತದ ಕಾಮಗಾರಿಗಳು ಮುಕ್ತಾಯಗೊಳ್ಳಲಿದ್ದು, ಪ್ರಸಕ್ತ ಸಾಲಿನಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು 250 ಅನುಷ್ಠಾನಗೊಳಿಸಲಾಗುವುದು. ಕೋಟಿ ರೂ. ವೆಚ್ಚದಲ್ಲಿ
58. ಮೈಸೂರು ಮತ್ತು ಸುತ್ತಮುತ್ತಲಿನ ಭಾಗದ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ ರೇಷ್ಮೆಗೂಡಿನ ಮಾರುಕಟ್ಟೆಯನ್ನು NABARD ಸಹಯೋಗದಲ್ಲಿ ಸ್ಥಾಪಿಸಲಾಗುವುದು.
59. ರೈತರು ಉತ್ಪಾದಿಸುವ ರೇಷ್ಮೆಗೂಡುಗಳಿಗೆ ಸೂಕ್ತ ಬೆಲೆ ದೊರಕಿಸಲು ಹಾಗೂ ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟವನ್ನು ಸಾಧಿಸುವ ದೃಷ್ಟಿಯಿಂದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗಳಲ್ಲಿ ಗುಣಮಟ್ಟ ಪರೀಕ್ಷೆ ಮತ್ತು ಶ್ರೇಣೀಕರಣದ ಕಾರ್ಯಕ್ಕಾಗಿ Assayer ಗಳನ್ನು ನಿಯೋಜಿಸಲಾಗುವುದು.
60. ರಾಜ್ಯದಲ್ಲಿ ರೇಷ್ಮೆ ಬೆಳೆ ವಿಸ್ತರಿಸಲು ರೇಷ್ಮೆ ಗೂಡಿನ ಪೂರ್ವ ಮತ್ತು ನಂತರದ ಚಟುವಟಿಕೆಗಳಿಗೆ ಪ್ರೋತ್ಸಾಹಿಸಲು ರೇಷ್ಮೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 55 ಕೋಟಿ ರೂ. ಅನುದಾನ ಒದಗಿಸಲಾಗುವುದು.
ಪಶುಸಂಗೋಪನೆ
61. ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ “ಅನುಗ್ರಹ” ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10,000 ರೂ. ಗಳಿಂದ 15,000 ರೂ. ಗಳಿಗೆ; ಕುರಿ/ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 5,000 ರೂ. ಗಳಿಂದ 7,500 ರೂ. ಗಳಿಗೆ ಹಾಗೂ 3-6 ತಿಂಗಳ ಕುರಿ/ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 3,500 ರೂ.ಗಳಿಂದ 5,000 ರೂ.ಗಳಿಗೆ ಹೆಚ್ಚಿಸಲಾಗುವುದು.
62. ಕಳೆದ ಎರಡು ವರ್ಷಗಳಲ್ಲಿ 60 ಹೊಸ ಪಶು ಚಿಕಿತ್ಸಾಲಯಗಳನ್ನು ಕಾರ್ಯಾರಂಭಗೊಳಿಸಲಾಗಿದ್ದು, 2025-26 ಸಾಲಿನಲ್ಲಿ 50 ನೂತನ ಪಶು ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗುವುದು.
63. 2025-26ನೇ ಸಾಲಿನಲ್ಲಿ 100 ಪಶು ವೈದ್ಯಕೀಯ ಸಂಸ್ಥೆಗಳ ಕಟ್ಟಡಗಳನ್ನು 김녕 ನಿರ್ಮಿಸಲಾಗುವುದು. ಸಹಯೋಗದೊಂದಿಗೆ
64. ಅಮೃತ ಮಹಲ್ ಕಾವಲುಗಳಲ್ಲಿನ ಭೂ ಒತ್ತುವರಿ ತಡೆಯಲು ಹಾಗೂ ಅಮೃತ್ ಮಹಲ್ ರಾಸುಗಳಿಗೆ ಮೇವು ಲಭ್ಯವಾಗುವಂತೆ ಮಾಡಲು, ಆರಣ್ಯ ಹಾಗೂ ನರೇಗಾ ಸಹಯೋಗದೊಂದಿಗೆ ಮೇವಿನ ಮರಗಳ ನೆಡುತೋಪು ಅಭಿವೃದ್ಧಿಗೊಳಿಸಲಾಗುವುದು.
65. ರಾಜ್ಯದ ಹೆಮ್ಮೆಯ ದೇಶಿ ದನದ ತಳಿಗಳಾದ ಹಳ್ಳಿಕಾರ್, ಕಿಲಾರಿ, ಆಮೃತ್ ಮಹಲ್ ಹಾಗೂ ಬಂಡೂರು ಕುರಿ ತಳಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಒದಗಿಸಲಾಗುವುದು.
66. ಆಧುನಿಕ ಕುರಿ ಸಾಕಾಣಿಕೆ ಪದ್ಧತಿಗಳು ಮತ್ತು ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಲಸೆ ಕುರಿಗಾರರಿಗೆ ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ತರಬೇತಿ ನೀಡಲಾಗುವುದು.
67. ನಮ್ಮ ಸರ್ಕಾರವು ಅಸ್ತಿತ್ವಕ್ಕೆ ಬಂದ ನಂತರ ನಂದಿನಿ” ಬ್ಯಾಂಡ್ ಮಾರುಕಟ್ಟೆಯನ್ನು ವಿಸ್ತರಿಸಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದೆ. 2024-25ನೇ ಸಾಲಿನಲ್ಲಿ ಪ್ರತಿ ಒಂದು ಕೋಟಿಗೂ ಹೆಚ್ಚು ಲೀಟರ್ ಹಾಲನ್ನು ಶೇಖರಿಸಲಾಗಿದೆ.
ಮೀನುಗಾರಿಕೆ
68. ರಾಜ್ಯದ ಮತ್ತ್ವ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು.
69. ಮಂಗಳೂರಿನಲ್ಲಿರುವ ನಿಗದಿಪಡಿಸಿರುವ ಮೀನುಗಾರಿಕೆ ಕಾಲೇಜಿಗೆ ವಿದ್ಯಾರ್ಥಿಗಳ ದ್ವಿಗುಣಗೊಳಿಸಲಾಗುವುದು. ಪ್ರಸ್ತುತ ಸಂಖ್ಯಾಬಲವನ್ನು
70. ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್ ಸಹಯೋಗದೊಂದಿಗೆ 30 ಕೋಟಿ ರೂ. ಒದಗಿಸಲಾಗುವುದು. ಅಭಿವೃದ್ಧಿಪಡಿಸಲು
71. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು.
72. ರಾಜ್ಯದಲ್ಲಿ ನೋಂದಣಿಯಾಗಿರುವ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್‌ಗಳನ್ನು ಬದಲಾಯಿಸಿ, ಹೊಸ ಇಂಜಿನ್ ಖರೀದಿಸಲು ಶೇ.50 ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ ನೀಡಲಾಗುವುದು.
73. ಪ್ರವಾಸಿಗರಿಗೆ ಶುಚಿ-ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಮೈಸೂರಿನಲ್ಲಿ ಹೈ-ಟೆಕ್ ಮತ್ತ್ವದರ್ಶಿನಿಯನ್ನು ಪ್ರಾರಂಭಿಸಲಾಗುವುದು.
74. ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ವಾಹನ ದಟ್ಟಣೆಯನ್ನು ನಿರ್ವಹಿಸಲು ‘ಮಲ್ಟಿ-ಲೆವೆಲ್ ಪಾರ್ಕಿಂಗ್” ವ್ಯವಸ್ಥೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು.
75. ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಪ್ರಸ್ತುತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲು ಕ್ರಮವಹಿಸಲಾಗುವುದು.
76. 2024-25 0 21.78 ថ្មី ៩ 18,960 ರೂ. ಕೃಷಿ ಸಾಲ ವಿತರಿಸಲಾಗಿದೆ. ರಿಯಾಯತಿ ಬಡ್ಡಿ ದರದಲ್ಲಿ ನೀಡುವ ಪುನರ್ಧನದ ಮಿತಿಯನ್ನು ನಬಾರ್ಡ್ ಶೇ.58ರಷ್ಟು ಕಡಿಮೆ ಮಾಡಿದ್ದರೂ ಸಹ, ನಿಗದಿತ ಗುರಿಯನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ. ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲವನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ.
77. 2023-24 ಸಾಲಿನ ಬೆಳಗಾವಿ ಅಧಿವೇಶನದಲ್ಲಿ . えん (DCC) (PCARD) ಬ್ಯಾಂಕುಗಳಿಗೆ ಸಂಬಂಧಿಸಿದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಮೇಲಿನ 240 ಕೋಟಿ ರೂ. ಬಡ್ಡಿಯನ್ನು ಮನ್ನಾ ಮಾಡಲಾಗಿದೆ.
78. ಯಶಸ್ವಿನಿ ಯೋಜನೆಯಡಿ ಇಲ್ಲಿಯವರೆಗೆ 700 ನೆಟ್ವರ್ಕ್ ಆಸ್ಪತ್ರೆಗಳು ನೋಂದಣಿಯಾಗಿದ್ದು. ಈ ಆಸ್ಪತ್ರೆಗಳಲ್ಲಿ ಇದುವರೆಗೂ ರಾಜ್ಯಾದ್ಯಂತ 59,000 ಫಲಾನುಭವಿಗಳು 103 ಕೋಟಿ ರೂ. ಮೊತ್ತದ ಚಿಕಿತ್ಸೆ ಪಡೆದಿರುತ್ತಾರೆ.
79. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಕೇಂದ್ರ ಪುರಸ್ಕೃತ ಗಣಕೀಕರಣ ಯೋಜನೆಯಡಿ 93 ಕೋಟಿ ರೂ.ಗಳಷ್ಟು
ಬಿಡುಗಡೆ ಮಾಡಿ, ರಾಜ್ಯದಲ್ಲಿ 110 ಸಂಘಗಳ ಗಣಕೀಕರಣವನ್ನು ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ, 3,000 ಸಂಘಗಳನ್ನು ಸಂಪೂರ್ಣವಾಗಿ ಗಣಕೀಕರಣಗೊಳಿಸಲು ಉದ್ದೇಶಿಸಲಾಗಿದೆ.
80. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಪ್ರತಿ ಕ್ವಿಂಟಾಲ್‌ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ ಪ್ರೋತ್ಸಾಹಧನ 450 ರೂ.ಗಳಂತೆ ಒಟ್ಟು 138 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ. ಇದರಿಂದ, ತೊಗರಿ ಬೆಳೆಯುವ ಪ್ರಮುಖ ಜಿಲ್ಲೆಗಳಾದ ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕೋಲಾರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಭಾಗದ ರೈತರಿಗೆ ಅನುಕೂಲವಾಗಲಿದೆ.
81. ಸಹಕಾರ ಇಲಾಖೆಯಲ್ಲಿ ಕಾರ್ಯಕ್ಷಮತೆ, ಪಾರದರ್ಶಕತೆ ಹಾಗೂ ಜನಸ್ನೇಹಿ ಸೇವೆಗಳನ್ನು ನೀಡಲು ಈ ಕೆಳಕಂಡ ಸುಧಾರಣಾ ಕ್ರಮಗಳನ್ನು ಜಾರಿಗೆ ತರಲಾಗುವುದು:
1) ರಾಜ್ಯದ ಎಲ್ಲಾ ನೊಂದಾಯಿತ ಗೃಹ ನಿರ್ಮಾಣ ಸಹಕಾರ ಸಂಘಗಳ ಮಾಹಿತಿಯನ್ನು ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳದ ವತಿಯಿಂದ ಆನ್‌ಲೈನ್‌ನಲ್ಲಿ ಅಳವಡಿಸಲಾಗುವುದು.
ii) ಠೇವಣಿದಾರರ ಹಿತಾಸಕ್ತಿಯನ್ನು ಕಾಪಾಡಲು ಹಾಗೂ ಆವ್ಯವಹಾರವನ್ನು ತಡೆಯಲು ಸಹಾಯವಾಣಿಯನ್ನು ಪ್ರಾರಂಭಿಸಲಾಗುವುದು.
iii) ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ವರದಿಗಳನ್ನು ಡಿಜಿಟಲೀಕರಣಗೊಳಿಸಲಾಗುವುದು.
82. ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಪೂರ್ಣಗೊಂಡಿರುವ ಉಗ್ರಾಣಗಳ DEFE ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಲು 376 ಕೋಟಿ ರೂ. ಸಹಾಯಾನುದಾನವನ್ನು ಹಿಂದಿನ ಆಯವ್ಯಯದಲ್ಲಿ ಘೋಷಿಸಿದ್ದೇನೆ. ಅದರಂತೆ, ಈಗಾಗಲೇ 329 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ, ಬಾಕಿ ಇರುವ 47 ಕೋಟಿ ರೂ. ಮೊತ್ತವನ್ನು ಒದಗಿಸಲಾಗುವುದು.
83. ರಾಜ್ಯದ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಪರವಾನಿಗೆ ಪಡೆದು ಕಾರ್ಯನಿರ್ವಹಿಸುತ್ತಿರುವ ಶ್ರಮಿಕರು ಮೃತರಾದಾಗ ಅವರ ವಾರಸುದಾರರಿಗೆ ಒಂದು ಲಕ್ಷ ರೂ. ವಿಮಾ ಮೊತ್ತವನ್ನು ನೀಡಲಾಗುತ್ತಿದ್ದು, ಸದರಿ ವಿಮಾ ಮೊತ್ತವನ್ನು ಐದು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು.
84. ಬೆಂಗಳೂರಿನಲ್ಲಿರುವ ಮಾರುಕಟ್ಟೆ ಸಮಿತಿಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುವುದರಿಂದ ಬೆಂಗಳೂರಿನ ಹೊರವಲಯದಲ್ಲಿ ಹೊಸ Satellite Market ಅನ್ನು ಸ್ಥಾಪಿಸಲಾಗುವುದು.
85. ಕೊಪ್ಪಳ ಜಿಲ್ಲೆಯ ಬೂದುಗುಂಪ ಗ್ರಾಮದಲ್ಲಿ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು KKRDB ವತಿಯಿಂದ 25 ಕೋಟಿ ರೂ. ವೆಚ್ಚದಲ್ಲಿ ಆಗತ್ಯ ಮೂಲಸೌಲಭ್ಯಗಳೊಂದಿಗೆ ಸ್ಥಾಪಿಸಲಾಗುವುದು.
86. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೈನುಗಾರಿಕೆಯನ್ನು ಉತ್ತೇಜಿಸಲು 10 ಕೋಟಿ ರೂ. ಅನುದಾನವನ್ನು ಪ್ರಥಮ ಹಂತದಲ್ಲಿ ನೀಡಲಾಗುವುದು, ಕಲಬುರಗಿಯಲ್ಲಿ ನೂತನ ಮೆಗಾ ಡೈರಿಯನ್ನು ಪ್ರಾರಂಭಿಸಲು KKRDB ವತಿಯಿಂದ 50 ಕೋಟಿ ರೂ. ಅನುದಾನ ಒದಗಿಸಲಾಗುವುದು.
87. KKRDB ವತಿಯಿಂದ ಕಲಬುರಗಿಯಲ್ಲಿ ಪ್ರಾದೇಶಿಕ ಸಹಕಾರ ಭವನವನ್ನು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದೆ.
88. KKRDB ಸಹಯೋಗದಿಂದ ಗ್ರಾಮೀಣ ಉಗ್ರಾಣಗಳನ್ನು 60 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು.
89. ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಅನುವಾಗುವಂತೆ ಬೆಂಗಳೂರಿನಲ್ಲಿ ಸುಸಜ್ಜಿತ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು ಪ್ರಾರಂಭಿಸಲಾಗುವುದು.
90. ಚಿಕ್ಕಬಳ್ಳಾಪುರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಹೈಟೆಕ್ ಹೂವಿನ ಮಾರುಕಟ್ಟೆಯನ್ನು ಹಾಗೂ ಕೆ.ಜಿ.ಎಫ್. ನಲ್ಲಿ ರೈತರ ಆಧುನಿಕ ಮಾರುಕಟ್ಟೆಯನ್ನು ಸಾರ್ವಜನಿಕ-ಖಾಸಗಿ ಸ್ಥಾಪಿಸಲಾಗುವುದು. ಸಹಭಾಗಿತ್ವದಲ್ಲಿ
ಜಲಸಂಪನ್ಮೂಲ
91. ನೀರಾವರಿ ಯೋಜನೆಗಳಡಿ ನೀರಿನ ಬಳಕೆಯಲ್ಲಿ ದಕ್ಷತೆ ಹೆಚ್ಚಿಸಲು ಹಾಗೂ ನೀರು ನಿರ್ವಹಣೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕರ್ನಾಟಕ ನೀರಾವರಿ (ತಿದ್ದುಪಡಿ) ವಿಧೇಯಕ 2024ನ್ನು ತಿದ್ದುಪಡಿ ಮಾಡಿ ಜಾರಿಗೊಳಿಸಲಾಗಿದೆ.
92. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ನೀರನ್ನು ಮೇಲೆತ್ತಿ ಗುರುತ್ವಾ ಕಾಲುವೆಯ ಸರಪಳಿ: 32.5 ಕಿ.ಮೀ ವರೆಗೆ ಹರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಎಲ್ಲಾ ಎಂಟು ವಿಯರ್ ಗಳಲ್ಲಿ ಲಭ್ಯವಾಗುವ ನೀರನ್ನು ಗುರುತ್ವಾ ಕಾಲುವೆಯ ಸರಪಳಿ: 241 ಕಿ.ಮೀ ವರೆಗೆ ಹರಿಸಲಾಗುವುದು. ಈ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು.
93. ಭದ್ರಾ ಮೇಲ್ದಂಡೆ ಯೋಜನೆಗೆ 2023-24ರ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಘೋಷಿಸಿದ 5,300 ಕೋಟಿ ರೂ. ಅನುದಾನ ಇನ್ನೂ ಬಿಡುಗಡೆಯಾಗಿರುವುದಿಲ್ಲ. ಆದರೂ, ರಾಜ್ಯ ಸರ್ಕಾರವು ಆಗತ್ಯ ಅನುದಾನವನ್ನು ಒದಗಿಸಿ ಈ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮವಹಿಸುತ್ತಿದೆ. ತರೀಕೆರೆ ಏತ ನೀರಾವರಿ ಯೋಜನೆಯಡಿ 79 ಕೆರೆಗಳನ್ನು ತುಂಬಿಸುವ ಮೂಲಕ 49,790 ಎಕರೆ ಸೂಕ್ಷ್ಮ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 2,611 ಕೋಟಿ ರೂ. ಅಂದಾಜು ಮೊತ್ತದ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಹೊಸದುರ್ಗ, ಹೊಳಲ್ಕೆರೆ, ಜಗಳೂರು, ಮೊಳಕಾಲ್ಲೂರು, ಚಳ್ಳಕೆರೆ ಮತ್ತು ಪಾವಗಡ ತಾಲ್ಲೂಕುಗಳಲ್ಲಿನ 30 ಕೆರೆಗಳನ್ನು ತುಂಬಿಸಿ ಒಂದು ಲಕ್ಷದ ಎಪ್ಪತ್ತೇಳು ಸಾವಿರ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯವನ್ನು ಕಲ್ಪಿಸಲಾಗುವುದು.
94. ಕೃಷ್ಣ ಮೇಲ್ದಂಡೆ ಯೋಜನೆ ಹಂತ-3ರ ವ್ಯಾಪ್ತಿಯ ಆಲಮಟ್ಟಿ ಆಣೆಕಟ್ಟಿನ ಗೇಟನ್ನು 524.256 ಮೀಟರ್‌ವರೆಗೆ ಎತ್ತರಿಸುವುದರಿಂದ ಮುಳುಗಡೆಯಾಗುವ ಜಮೀನುಗಳನ್ನು ಒಪ್ಪಂದ ಐತೀರ್ಪಿನ (Consent Award) ಮುಖಾಂತರ ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಿಕೊಂಡು ರೈತರಿಗೆ ಪರಿಹಾರ ವಿತರಣೆಗೆ ಕ್ರಮವಹಿಸಲಾಗುವುದು. ಅಲ್ಲದೇ, 2.01 ಲಕ್ಷ ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ 2 ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು. ಕಾಮಗಾರಿಗಳನ್ನು
95. ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ಪೂರ್ವ ಸಿದ್ಧತಾ ಕಾರ್ಯ ಅಂತಿಮಗೊಂಡಿದ್ದು, ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಗಳ ತೀರುವಳಿ ದೊರೆತ ಕೂಡಲೇ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು.
96. ಕಳಸಾ-ಬಂಡೂರಾ ನಾಲಾ ತಿರುವು ಯೋಜನೆಯಡಿ 3.9 ಟಿಎಂಸಿ ನೀರಿನ ಬಳಕೆಗಾಗಿ ಕೇಂದ್ರ ಸರ್ಕಾರದಿಂದ ತೀರುವಳಿಗಳನ್ನು ನಿರೀಕ್ಷಿಸಿ ಈಗಾಗಲೇ ಯೋಜನಾ ಕಾಮಗಾರಿಗಳನ್ನು ಕೆಲವು ಷರತ್ತುಗಳೊಂದಿಗೆ ಗುತ್ತಿಗೆ ವಹಿಸಲಾಗಿದೆ. ಕೇಂದ್ರ ಸರ್ಕಾರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು.
97. ಕೃಷ್ಣಾ ಕಣಿವೆ, ಕಾವೇರಿ ಕಣಿವೆ ಹಾಗೂ ಇತರ ನದಿಗಳ ಕಣಿವೆಯ ವಿವಿಧ ಯೋಜನೆಗಳಡಿ ಬಾಕಿ ಇರುವ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಅನುಬಂಧ-1 ರಲ್ಲಿ ಲಗತ್ತಿಸಿದೆ) (ಯೋಜನೆಯ ವಿವರಗಳನ್ನು
98. ಕೃಷ್ಣಾ ಕಣಿವೆಯ ಅನುಷ್ಠಾನ ಹಂತದಲ್ಲಿರುವ ಆಧುನೀಕರಣ ಹಾಗೂ ಏತ ನೀರಾವರಿ ಯೋಜನೆಗಳನ್ನು PMKSY – AIBP ಯೋಜನೆಯಡಿ ಕೇಂದ್ರ ಸರ್ಕಾರದ ಸಹಾಯಧನ ಪಡೆಯಲು ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು. (ಯೋಜನೆಯ ವಿವರಗಳನ್ನು ಅನುಬಂಧ-2 ರಲ್ಲಿ ಲಗತ್ತಿಸಿದೆ)
99. ಜಲಸಂಪನ್ಮೂಲ ಇಲಾಖೆಯಲ್ಲಿ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲಿ ಏಕರೂಪದ ತಾಂತ್ರಿಕ ಮಾನದಂಡಗಳನ್ನು ಜಾರಿಗೊಳಿಸಲಾಗುವುದು.
100. ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳಿನಿಂದಾಗಿ ನೀರಿನ ಸಂಗ್ರಹಣೆಯಲ್ಲಿ ಆಗಿರುವ ಕೊರತೆಯನ್ನು ಸರಿದೂಗಿಸಲು ಕೊಪ್ಪಳ ಜಿಲ್ಲೆಯಲ್ಲಿ ನವಲಿ ಸಮತೋಲನಾ ಜಲಾಶಯ ನಿರ್ಮಾಣವೂ ಸೇರಿದಂತೆ F ಮಾರ್ಗೋಪಾಯಗಳ ಬಗ್ಗೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು.
101. ರಾಜ್ಯದ ಪ್ರಮುಖ ಆಣೆಕಟ್ಟು ಗೇಟುಗಳ ಸದೃಢತೆಯನ್ನು ತಾಂತ್ರಿಕ ಪರಿಶೀಲನೆಗೊಳಪಡಿಸಿ ಅಗತ್ಯ ಕಂಡುಬಂದಲ್ಲಿ ಗೇಟುಗಳನ್ನು ದುರಸ್ತಿಗೊಳಿಸಲು ಮತ್ತು ಬದಲಿಸಲು ಆದ್ಯತೆಯ ಮೇಲೆ ಕ್ರಮವಹಿಸಲಾಗುವುದು.
ಸಣ್ಣ ನೀರಾವರಿ
102. ಎತ್ತಿನಹೊಳೆಯ ಯೋಜನೆಯಿಂದ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ 45 ಕೆರೆಗಳನ್ನು ಹಾಗೂ ಕೊರಟಗೆರೆ ತಾಲ್ಲೂಕಿನ 62 ಕೆರೆಗಳನ್ನು ತುಂಬಿಸಿ ಅಂತರ್ಜಲ ಹೆಚ್ಚಿಸುವ ಯೋಜನೆಯನ್ನು 553 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು.
103. ಪ್ರಗತಿಯಲ್ಲಿರುವ ಈ ಕೆಳಗಿನ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.
i) 1,080 ಕೋಟಿ ರೂ. ಮೊತ್ತದ ವೃಷಭಾವತಿ ವ್ಯಾಲಿ ಮೊದಲನೇ ಹಂತದ 70 ಕೆರೆ ತುಂಬಿಸುವ ಯೋಜನೆ:
ii) 70 ಕೋಟಿ ರೂ. ಮೊತ್ತದ ಹೆಚ್.ಎನ್ ವ್ಯಾಲಿ 2ನೇ ಹಂತದ ಯೋಜನೆಯಡಿ 24 ಕೆರೆ ತುಂಬಿಸುವ ಯೋಜನೆ:
iii) 93.50 ಕೋಟಿ ರೂ. ಮೊತ್ತದ ಬೆಂಗಳೂರು ಪೂರ್ವ ತಾಲ್ಲೂಕಿನ 18 ಕೆರೆ ತುಂಬಿಸುವ ಯೋಜನೆ ಹಾಗೂ ಇತರೆ ಯೋಜನೆಗಳು (ಯೋಜನೆಯ ವಿವರಗಳನ್ನು ಅನುಬಂಧ-3 ರಲ್ಲಿ ಲಗತ್ತಿಸಿದೆ)
104. ಪ್ರಸಕ್ತ ಸಾಲಿನಲ್ಲಿ ರಾಜ್ಯಾದ್ಯಂತ ಸಣ್ಣ ನೀರಾವರಿ ಯೋಜನೆಗಳಾದ ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕಪ್, ಕಿಂಡಿ ಅಣೆಕಟ್ಟು, ಏತ ನೀರಾವರಿ, ನಿಷ್ಕ್ರಿಯ ಯೋಜನೆಗಳ ಪುನರುಜ್ಜಿವನ ಇತ್ಯಾದಿ ಯೋಜನೆಗಳಡಿ ಒಟ್ಟಾರೆ 2,000 ಕೋಟಿ ರೂ. ಮೊತ್ತದ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
ಶಾಲಾ ಶಿಕ್ಷಣ
105. ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್
ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ವಿಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು.
106. ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಈ ಯೋಜನೆಯನ್ನು 2025-26ನೇ ಸಾಲಿನಲ್ಲಿಯೂ ಮುಂದುವರೆಸಲಾಗುವುದು.
107. ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ಒಟ್ಟಾರೆ 100 ಕೋಟಿ ರೂ. ವೆಚ್ಚದ ಈ ಯೋಜನೆಯ ಶೇ.25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದಿಂದ ಭರಿಸಲಾಗುವುದು.
108. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು.
109. ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು.
110. ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು.
III. LKG ಯಿಂದ ದ್ವಿತೀಯ ಪಿ.ಯು.ಸಿ ವರೆಗಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ ಮೂರು ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಈ ಮೂಲಕ SSLC ಮತ್ತು PUC ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರಲಾಗುವುದು. ಇದಕ್ಕಾಗಿ, ಈ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು:
i) ಪ್ರಸ್ತುತ 2,619 ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ພວ 90,195 ವಿದ್ಯಾರ್ಥಿಗಳು ದಾಖಲಾಗಿರುತ್ತಾರೆ. ಈ ಯೋಜನೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 5.000 ಶಾಲೆಗಳಿಗೆ ವಿಸ್ತರಿಸಲಾಗುವುದು.
ii) ‘ಕಲಿಕಾ ಚಿಲುಮೆ’ ಕಾರ್ಯಕ್ರಮದಡಿ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ ಒದಗಿಸುವುದು.
iii) ‘ಗಣಿತ ಗಣಕ’ ಕಾರ್ಯಕ್ರಮದಡಿ 3 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಫೋನ್ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ರಾಜ್ಯಾದ್ಯಂತ ವಿಸ್ತರಿಸುವುದು. ಮೂಲಕ
iv) ‘ಓದು ಕರ್ನಾಟಕ’ ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದು.
v) ಸರ್ಕಾರಿ ಶಾಲೆಗಳಲ್ಲಿ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ
ಹೆಚ್ಚಿಸುವ ‘ಮರುಸಿಂಚನ’ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸುವುದು.
vi) ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು ಹಾಗೂ ಗಣಿತದ ಆರಂಭಿಕ ಸಾಮರ್ಥ್ಯಗಳನ್ನು ಗಳಿಸಲು Ek-Step ಸಂಸ್ಥೆಯ ಸಹಯೋಗದೊಂದಿಗೆ AI ಆಧಾರಿತ ‘ಕಲಿಕಾದೀಪ’ ಕಾರ್ಯಕ್ರಮವನ್ನು 2,000 ಶಾಲೆಗಳಿಗೆ ವಿಸ್ತರಿಸುವುದು.
vii) ‘ಜ್ಞಾನಸೇತು’ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳಲ್ಲಿ ವಿಜ್ಞಾನ ಮತ್ತು ಗಣಿತ ವಿಷಯಗಳ ಬೋಧನಾ ವಿಧಾನದಲ್ಲಿ ನಾವೀನ್ಯತೆ ಅಳವಡಿಸಿ, ಖಾನ್ ಅಕಾಡೆಮಿ ಸಹಯೋಗದಲ್ಲಿ ಯೋಜನೆ ರೂಪಿಸಲಾಗುವುದು. ರಾಜ್ಯದ 5,000 ಸರ್ಕಾರಿ ಶಾಲೆಗಳ 20 ಲಕ್ಷ ವಿದ್ಯಾರ್ಥಿಗಳು ಹಾಗೂ 15,000 ಶಿಕ್ಷಕರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.
viii) ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೋಡಿಂಗ್ ಕಲಿಕೆ ಪರಿಚಯಿಸಲು ಆಗಸ್ತ್ರ ಫೌಂಡೇಶನ್ ಸಹಯೋಗದೊಂದಿಗೆ ಐ-ಕೋಡ್ ಲ್ಯಾಬ್ ಸ್ಥಾಪಿಸಲಾಗುವುದು. ಈ ನಿಟ್ಟಿನಲ್ಲಿ ಪ್ರಸಕ್ತ ವರ್ಷ ICT ಸೌಲಭ್ಯವಿರುವ ಆಯ್ದ 63 ಶಾಲೆಗಳನ್ನು ಹಬ್ ಸಹಾಯ 2025-26 ಗಳೆಂದು ಪರಿಗಣಿಸಿ 756 ಸ್ಟೋಕ್ ಶಾಲೆಗಳಿಗೆ ಅನುಕೂಲ ಕಲ್ಪಿಸುವುದು.
ix) ‘ವಿದ್ಯಾವಿಜೇತ’ ಕಾರ್ಯಕ್ರಮದಡಿ ಪೂರ್ವ ADFO ಪದವಿ យកជ 25,000 ವಿದ್ಯಾರ್ಥಿಗಳಿಗೆ CET/NEET/JEE ತರಬೇತಿ ನೀಡಲಾಗಿದ್ದು, ಸದರಿ ಕಾರ್ಯಕ್ರಮವನ್ನು ಮುಂದುವರೆಸಲು 5 ಕೋಟಿ ರೂ. ಒದಗಿಸಲಾಗುವುದು.
112. ‘2000’ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.
113. ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು ರಾಜ್ಯದ 4,000 ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ವಿಭಾಗವನ್ನು ಪ್ರಾರಂಭಿಸಲಾಗುವುದು.
114. ರಾಜ್ಯದ 2,710 ಸರ್ಕಾರಿ ಪ್ರೌಢಶಾಲೆಗಳಲ್ಲಿ ಈಗಾಗಲೇ ಕಂಪ್ಯೂಟರ್ ಮತ್ತು ವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಇನ್ನೂ 500 ಶಾಲೆಗಳಿಗೆ ಈ ಸೌಲಭ್ಯ ವಿಸ್ತರಿಸಲಾಗುವುದು.
115. ಪ್ರೌಢಶಾಲಾ / ಪದವಿ ಪೂರ್ವ ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲು Skill at School ಕಾರ್ಯಕ್ರಮ ರೂಪಿಸಲಾಗಿದೆ. ಇದರಡಿ, ಆಯ್ದ 7,500 ವಿದ್ಯಾರ್ಥಿಗಳಿಗೆ ಉನ್ನತೀಕರಿಸಿದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ನೀಡಲಾಗುವುದು.
116. ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ రాయగలిగి 725 ఓ ರೂ. ಹಾಗೂ ಆಗತ್ಯ ಪೀಠೋಪಕರಣಗಳನ್ನು ಒದಗಿಸಲು 50 ಕೋಟಿ ರೂ. ನೀಡಲಾಗಿದೆ.
117. ಮಧ್ಯಾಹ್ನ ಉಪಹಾರ ಯೋಜನೆಯಡಿ ರಾಜ್ಯದ 16347 ಶಾಲೆಗಳ ಅಡುಗೆಮನೆ ಆಧುನೀಕರಣ ಕಾರ್ಯ ಮತ್ತು ಹೊಸ ಪಾತ್ರೆ ಪರಿಕರಗಳನ್ನು ಒದಗಿಸಲು 46 ಕೋಟಿ ರೂ. ವೆಚ್ಚ ಮಾಡಲಾಗುವುದು.
118. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಕ್ಷರ ಆವಿಷ್ಕಾರ ಯೋಜನೆ ಆಡಿ 200 ಕೋಟಿ ರೂ. ವೆಚ್ಚದಲ್ಲಿ ಆಯ್ದ 50 ಶಾಲೆಗಳನ್ನು ಸುಸಜ್ಜಿತ ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು.
119. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಮುಂದುವರೆದು, ಇಲಾಖೆಯಲ್ಲಿ ಇನ್ನೂ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ 5,000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು.
120, ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ಭಾರತ ಸೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಒದಗಿಸಲಾಗುವುದು.
ಉನ್ನತ ಶಿಕ್ಷಣ
121. ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ o (Centre of Excellence) ដ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
122. ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ|| ಮನಮೋಹನ್ シロア ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಅಭಿವೃದ್ಧಿಪಡಿಸಲಾಗುವುದು. ಕಾಲೇಜುಗಳನ್ನಾಗಿ
123. ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸಲಾಗುವುದು.
124. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು.
125. ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು.
126. ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್ ಇಂಜಿನಿಯರಿಂಗ್ ಕಾಲೇಜುಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪುಸ್ತಕಗಳನ್ನು ಒದಗಿಸಲಾಗುವುದು. ಹಾಗೂ
127. ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಇಂಗ್ಲೆಂಡ್ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ Chevening Karnataka Masters Fellowship ನೆರವಿನೊಂದಿಗೆ ಒಂದು ವರ್ಷದ ಸ್ನಾತಕೋತ್ತರ ಪದವಿ ಪಡೆಯುವ ಯೋಜನೆ ರೂಪಿಸಲಾಗಿದೆ.
128. ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನದಿಂದ ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ವೃತ್ತಿಪರ ವಿಷಯ ತಜ್ಞರನ್ನು ‘Professor of Practice ರನ್ನಾಗಿ ಉದ್ದೇಶಿಸಲಾಗಿದೆ. ನೇಮಿಸಲು
129. ಉನ್ನತ ಶಿಕ್ಷಣ ಸಂಸ್ಥೆಗಳ ಸಮಗ್ರ ನಿರ್ವಹಣೆಗಾಗಿ ಜಾರಿಮಾಡಿರುವ UUCMS ತಂತ್ರಾಂಶವನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಒಟ್ಟಾರೆ 30 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುವುದು.
130. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು 150 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
267. ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಮತ್ತು ಗುಣಾತ್ಮಕವಾಗಿ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕಳೆದ ಸಾಲಿನ ಆಯವ್ಯಯದಲ್ಲಿ 5,200 ಕೋಟಿ ರೂ. ವೆಚ್ಚದಲ್ಲಿ ‘ಪ್ರಗತಿ ಪಥ’ ರಸ್ತೆ ಅಭಿವೃದ್ಧಿ ಯೋಜನೆಯನ್ನು ಬಾಹ್ಯ ನೆರವಿನೊಂದಿಗೆ ಪ್ರಾರಂಭಿಸುವುದಾಗಿ ಘೋಷಿಸಲಾಗಿರುತ್ತದೆ. ಯೋಜನೆಯನ್ನು 2025-26 ಅನುಷ್ಠಾನಗೊಳಿಸಲಾಗುವುದು. ಸಾಲಿನಿಂದ
268. ಜಲ ಜೀವನ್ ಮಿಷನ್ ಯೋಜನೆಗಾಗಿ ಇದುವರೆಗೆ ಕೇಂದ್ರ ಸರ್ಕಾರದಿಂದ 11,787 ಕೋಟಿ ರೂ. ಮತ್ತು ರಾಜ್ಯ ಸರ್ಕಾರದಿಂದ 20,703 ens do ಬಿಡುಗಡೆ ಮಾಡಲಾಗಿರುತ್ತದೆ. 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ 3,800 ಕೋಟಿ ರೂ.ಗಳಲ್ಲಿ ಕೇವಲ 571 ಕೋಟಿ ರೂ. ಮಾತ್ರ ಬಿಡುಗಡೆ ಮಾಡಲಾಗಿರುತ್ತದೆ. ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದಿಂದ ಮುಂಗಡವಾಗಿ 8,400 d مه ಬಿಡುಗಡೆ ಮಾಡಲಾಗಿರುತ್ತದೆ. 2025-26 ನೇ ಸಾಲಿಗೆ ಈ ಯೋಜನೆಗಾಗಿ ರಾಜ್ಯ ಸರ್ಕಾರದಿಂದ 6,050 ಕೋಟಿ ರೂ. ಒದಗಿಸಲಾಗುವುದು.
269. ಕಲ್ಯಾಣ ಕರ್ನಾಟಕ ಭಾಗದಲ್ಲಿ 38 ವಿಧಾನಸಭಾ ಕ್ಷೇತ್ರಗಳಿಗೆ ಘೋಷಿಸಲಾದ ‘ಕಲ್ಯಾಣ ಪಥ’ ಯೋಜನೆಯಡಿ 1,000 ಕೋಟಿ ರೂ. ಮೊತ್ತದ 286 ರಸ್ತೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು.
270. ಗ್ರಾಮ ಪಂಚಾಯತಿ ಮಟ್ಟದಲ್ಲಿನ ಅರಿವು ಕೇಂದ್ರಗಳಲ್ಲಿ ವಿಜ್ಞಾನ. ಕಲೆ, ಸಾಹಿತ್ಯ ಮತ್ತು ವೃತ್ತಿ ಮಾರ್ಗದರ್ಶನ ಕುರಿತಾದ ‘ಚಿಗುರು’ ಕಾರ್ಯಕ್ರಮ, ಮಕ್ಕಳು ಮತ್ತು ಮಹಿಳೆಯರಿಗಾಗಿ ‘ಸಂವಿಧಾನ ಸಾಕ್ಷರತೆ’, ಮಹಿಳೆಯರಿಗಾಗಿ ‘ಡಿಜಿಟಲ್ ಮತ್ತು ಆರ್ಥಿಕ ಸಾಕ್ಷರತೆ’ ಹಾಗೂ ಮಹಿಳಾ ಚುನಾಯಿತ ಪ್ರತಿನಿಧಿಗಳಿಗೆ ‘ಅಧಿಕಾರ-ಸಾಕಾರ’ ಸಾಮರ್ಥ್ಯಾಭಿವೃದ್ಧಿ ಹಮ್ಮಿಕೊಳ್ಳಲಾಗುವುದು. ತರಬೇತಿ ಕಾರ್ಯಕ್ರಮಗಳನ್ನು
271. ಸೌರಶಕ್ತಿಯನ್ನು ಬಳಸಿ ಗ್ರಾಮ ಪಂಚಾಯಿತಿಗಳ ವಿದ್ಯುತ್ ಬಿಲ್ಲಿನ ಹೊರೆಯನ್ನು ತಗ್ಗಿಸಲು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್ ಮೈಕ್ರೋ-ಗ್ರಿಡ್‌ಗಳನ್ನು ಸ್ಥಾಪಿಸಲಾಗುವುದು.
272. ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಮತ್ತು ಗ್ರಾಮೀಣ ಜನರಿಗೆ ವ್ಯವಸ್ಥಿತ ರೀತಿಯಲ್ಲಿ ಸೇವೆಗಳನ್ನು ಒದಗಿಸುವ ಹಿತದೃಷ್ಟಿಯಿಂದ ಕೈಗೊಳ್ಳಲಾಗುವುದು; ಕೆಳಕಂಡ ಉಪಕ್ರಮಗಳನ್ನು i) ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿರುವ ಆಸ್ತಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲು ‘ಇ-ಸ್ವತ್ತು ಅಭಿಯಾನ’ ವನ್ನು ಆರಂಭಿಸಲಾಗುವುದು.
ii) ಪಂಚತಂತ್ರ ತಂತ್ರಾಂಶವನ್ನು ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೂ ವಿಸ್ತರಿಸಲಾಗುವುದು.
iii) ವಿಕೇಂದ್ರಿಕೃತ ಡಿಜಿಟಲ್ ಗ್ರಂಥಾಲಯಗಳ ನಿರ್ವಹಣೆ ಮತ್ತು ಪ್ರಗತಿ ಹಾಗೂ ಸ್ವ-ಸಹಾಯ ಸಂಘಗಳ ಮೂಲಕ ಕೈಗೊಳ್ಳಲಾಗುತ್ತಿರುವ ತ್ಯಾಜ್ಯ ನಿರ್ವಹಣೆಯ ಪ್ರಗತಿಯನ್ನು ಪಂಚತಂತ್ರ ತಂತ್ರಾಂಶದ ನಿರ್ವಹಿಸಲಾಗುವುದು. ಮೂಲಕ
iv) ಹಿರಿಯ ಅಧಿಕಾರಿಗಳಿಂದ ಗ್ರಾಮ ಪಂಚಾಯತಿಗಳನ್ನು ದತ್ತು ಪಡೆದು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪಂಚಾಯತಿ ದತ್ತು’ ಕಾರ್ಯಕ್ರಮವನ್ನು ಆರಂಭಿಸಲಾಗುವುದು.
273. ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಈ ಕೆಳಕಂಡ ಕಾರ್ಯಯೋಜನೆಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ:
i) ತ್ಯಾಜ್ಯ ನೀರನ್ನು ನಿರ್ವಹಣೆ ಮಾಡಲು 500 ಗ್ರಾಮಗಳಲ್ಲಿ ಬೂದು ನೀರು ನಿರ್ವಹಣಾ ನಿರ್ಮಿಸಲಾಗುವುದು. ಘಟಕಗಳನ್ನು
ii) ಗ್ರಾಮೀಣ ಪ್ರದೇಶದ ಸ್ವ-ಸಹಾಯ ಪಾಲ್ಗೊಳ್ಳುವಿಕೆಯೊಂದಿಗೆ ಮಿಶ್ರ ಬೆಳೆ ಪದ್ಧತಿಯಲ್ಲಿ ಸಂಬಾರ ಪದಾರ್ಥಗಳು ಹಾಗೂ ಹಣ್ಣಿನ ಬೆಳೆಗಳನ್ನು ಒಟ್ಟು 5,000 ಎಕರೆ ಪ್ರದೇಶದಲ್ಲಿ ಬೆಳೆಸಲಾಗುವುದು.
iii) ಗ್ರಾಮೀಣ ಪ್ರದೇಶಗಳಲ್ಲಿ ಹಾದುಹೋಗುವ ರಾಜ್ಯ ಮತ್ತು ಜಿಲ್ಲಾ ರಸ್ತೆಗಳ 5,000 ಕಿ.ಮೀ. ಬದಿಗಳಲ್ಲಿ ಸಸಿಗಳನ್ನು ಬೆಳೆಸಿ ‘ಹಸಿರು ಪಥ ‘ಗಳನ್ನು ನಿರ್ಮಾಣ ಮಾಡಲಾಗುವುದು.
iv) ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ‘ಕೃಷಿ ಪಥ’ ಯೋಜನೆಯನ್ನು ಜಾರಿಗೊಳಿಸಲಾಗುವುದು.
v) ರೈತರ ಜಮೀನುಗಳಲ್ಲಿ ಅಂತರ್ಜಲ ಹೆಚ್ಚಳ ಹಾಗೂ ಮಣ್ಣಿನ ಸಂರಕ್ಷಣೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ‘ಕೃಷಿ ಕವಚ’ ಕಾರ್ಯಕ್ರಮ ರೂಪಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಒಟ್ಟು 50,000 ಹೆಕ್ಟೇರ್ ಬದು ನಿರ್ಮಾಣ ಮಾಡಲಾಗುವುದು.
274. ನೀರು ಸರಬರಾಜು ಮೂಲಭೂತ ಸೌಕರ್ಯಗಳ ಸುಸ್ಥಿರ ಮತ್ತು ವೈಜ್ಞಾನಿಕ ನಿರ್ವಹಣೆ ಸಲುವಾಗಿ ಭೌಗೋಳಿಕ ಮಾಹಿತಿ ವ್ಯವಸ್ಥೆ (GIS) ಆಧಾರಿತ ಮೊಬೈಲ್ ಮತ್ತು ವೆಬ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುವುದು.
275. ಗ್ರಾಮ ಪಂಚಾಯತಿಗಳ ಸುಸ್ಥಿರ ಆದಾಯದ ಮೂಲಗಳನ್ನು ಬಲಪಡಿಸಲು ಗ್ರಾಮ ಪಂಚಾಯತಿ ಸ್ವತ್ತುಗಳನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ಆದಾಯದ ಅನುಕೂಲವಾಗುವಂತೆ ಅಭಿವೃದ್ಧಿಪಡಿಸಲಾಗುವುದು. ಸೃಜನೆಗೆ
ಯೋಜನೆ
276. ರಾಜ್ಯದ ಅಭಿವೃದ್ಧಿ ಹಾಗೂ ಪ್ರಾದೇಶಿಕ ಅಸಮತೋಲನೆ ಬಗ್ಗೆ ಅಧ್ಯಯನ ನಡೆಸಲು ಪ್ರೊ. ಎಂ. ಗೋವಿಂದರಾವ್ ರವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಪ್ರಾದೇಶಿಕ ಆಸಮತೋಲನಾ ನಿವಾರಣಾ ಸಮಿತಿಯನ್ನು ರಚಿಸಲಾಗಿದೆ. ಸದರಿ ಸಮಿತಿಯು ನೀಡುವ ವರದಿಯನ್ನು ಆಧರಿಸಿ, ಪ್ರಾದೇಶಿಕ ಅಸಮತೋಲನಾ ನಿವಾರಣೆಗೆ ಸೂಕ್ತ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಆಳವಡಿಸಿಕೊಳ್ಳಲಾಗುವುದು.
277. ಕಲ್ಯಾಣ ಕರ್ನಾಟಕ ಪ್ರದೇಶಗಳ ಅಭಿವೃದ್ಧಿಗೆ 5,000 ಕೋಟಿ ರೂ. ಮೊತ್ತದ ಹೊಸ ಯೋಜನೆಗಳನ್ನು KKRDB ವತಿಯಿಂದ ಅನುಷ್ಠಾನಗೊಳಿಸಲಾಗುವುದು. ಕಾಮಗಾರಿಗಳ ಗುಣಮಟ್ಟವನ್ನು ಖಚಿತ ಪಡಿಸಿಕೊಳ್ಳಲು ವಿಶೇಷ ಕ್ರಮ ತೆಗೆದುಕೊಳ್ಳಲಾಗುವುದು.
278. ಬಯಲುಸೀಮೆ, ಮಲೆನಾಡು ಹಾಗೂ ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಗಳಿಗೆ ಒಟ್ಟಾರೆಯಾಗಿ 83 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.
279. ರಾಜ್ಯದ ಗಡಿಗಳಲ್ಲಿನ ಮೂಲಸೌಕರ್ಯ ಹಾಗೂ ಸಾಮಾಜಿಕ ಸುಧಾರಣೆ ಕಾರ್ಯಕ್ರಮಗಳನ್ನು భరిణామకారియాగి ಜಾರಿಗೊಳಿಸಲು ಗಡಿ ಅಭಿವೃದ್ಧಿ ಪ್ರಾಧಿಕಾರವನ್ನು ಯೋಜನಾ ಇಲಾಖೆಯ ವ್ಯಾಪ್ತಿಗೆ ತರಲಾಗುವುದು.