ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿ ಬಜೆಟ್ ಮಂಡನೆ ಮಾಡಿದ್ದು, ರಾಜ್ಯದ ಎಲ್ಲಾ ಇಲಾಖೆಗಳಿಗೆ ಬಂಪರ್ ಅನುದಾನ ಘೋಷಣೆ ಮಾಡಿದ್ದಾರೆ. ಪ್ರತಿ ಇಲಾಖೆಗೂ ಭರ್ಜರಿ ಅನುದಾನ ಘೋಷಣೆ ಮಾಡಿದ್ದು ಇಲಾಖಾವಾರು ಅನುದಾನ ಹಂಚಿಕೆ ಮಾಡಿರುವ ಸಂಪೂರ್ಣ ವಿವರ ಇಲ್ಲಿದೆ.
ಶಿಕ್ಷಣ ಇಲಾಖೆಗೆ 47,224 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಅದೇ ರೀತಿ ಇಂಧನ ಇಲಾಖೆಗೆ 29,947 ಕೋಟಿ ರೂಪಾಯಿ ಹಂಚಿಕೆ ಮಾಡಿದ್ದು, ಗ್ರಾಮೀಣ ಅಭಿವೃದ್ಧಿ ಇಲಾಖೆಗೆ 26,559 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ.
ಜಲ ಸಂಪನ್ಮೂಲ ಇಲಾಖೆಗೆ 22, 436 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು, ನಗರ ಅಭಿವೃದ್ಧಿ ಮತ್ತು ವಸತಿ ಇಲಾಖೆಗೆ 22, 203 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ. ಒಳ ಆಡಳಿತ ಮತ್ತು ಸಾರಿಗೆ ಇಲಾಖೆಗೆ 23,100 ಕೋಟಿ ಅನುದಾನ ಹಂಚಿಕೆ ಮಾಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,817 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ. ಇನ್ನು ಕಂದಾಯ ಇಲಾಖೆಗೆ 19,843 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು, ಸಮಾಜ ಕಲ್ಯಾಣ ಇಲಾಖೆಗೆ 18,612 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ.
ಲೋಕೋಪಯೋಗಿ ಇಲಾಖೆಗೆ 11,424 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು, ಆಹಾರ ಇಲಾಖೆಗೆ 7,942 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ.ಕೃಷಿ ಇಲಾಖೆಗೆ 8,373 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ 4084 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ ಇತರೆ ಇಲಾಖೆಗಳಿಗೆ ಒಟ್ಟು ರೂ. 1,72,757 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ.







