ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಬಳಿಕ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು.
ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದೇವೆ ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದು ಘೋಷಿಸಿದರು.






