Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿಕ್ಕಮಗಳೂರಲ್ಲಿ ರಿವಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣು!

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಐವರು ಆರೋಪಿಗಳಿಗೆ ಬಿಗ್ ರಿಲೀಫ್ : ಜಾಮೀನು ರದ್ದು ಕೋರಿದ್ದ ಅರ್ಜಿ ವಜಾ

BREAKING : ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಣೆ ಪತ್ತೆ : ಆರೋಪಿ ಅರೆಸ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BUDGET BREAKING : ರಾಜ್ಯದ ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : 5 ಕೆಜಿ ಅಕ್ಕಿ ಬದಲು ಈಗ `ಇಂದಿರಾ ಕಿಟ್’ ವಿತರಣೆ !
KARNATAKA

BUDGET BREAKING : ರಾಜ್ಯದ ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : 5 ಕೆಜಿ ಅಕ್ಕಿ ಬದಲು ಈಗ `ಇಂದಿರಾ ಕಿಟ್’ ವಿತರಣೆ !

By kannadanewsnow57
Budget (2)
Budget (2)

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಬಜೆಟ್‌ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ಇದು ಅವರು ಮಂಡಿಸುತ್ತಿರುವ ದಾಖಲೆಯ 17ನೇ ಆಯವ್ಯಯವಾಗಿದ್ದು, ಈ ಬಾರಿಯ ಒಟ್ಟು ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂ.ಗಳಾಗಿದೆ. ಕೃಷಿ, ಉದ್ಯೋಗ, ಮತ್ತು ಸಾಹಿತ್ಯ ಕ್ಷೇತ್ರಗಳಿಗೆ ಭರ್ಜರಿ ಕೊಡುಗೆ ನೀಡಿರುವ ಈ ಬಜೆಟ್‌ನಲ್ಲಿ, ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ (Social Media) ಬಳಸುವಂತಿಲ್ಲ ಎಂಬ ಅತ್ಯಂತ ಮಹತ್ವದ ಹಾಗೂ ದಿಟ್ಟ ಘೋಷಣೆಯನ್ನು ಸಿಎಂ ಮಾಡಿದ್ದಾರೆ.

ಬಜೆಟ್ ಮಂಡನೆಗೂ ಮುನ್ನ ಮಾತನಾಡಿದ ಮುಖ್ಯಮಂತ್ರಿಗಳು, “ನಮ್ಮ ಸರ್ಕಾರವು ಕೋಟ್ಯಂತರ ಕುಟುಂಬಗಳ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಮೂಲಕ ನಾವು ದೊಡ್ಡ ಸಾಧನೆ ಮಾಡಿದ್ದೇವೆ” ಎಂದು ಹರ್ಷ ವ್ಯಕ್ತಪಡಿಸಿದರು.

2026-27ನೇ ಸಾಲಿನ ಬಜೆಟ್‌ನ ಪ್ರಮುಖ ಹೈಲೈಟ್ಸ್:

ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ (Breaking): ಮಕ್ಕಳ ಭವಿಷ್ಯ ಮತ್ತು ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ, ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸುವ ಮಹತ್ವದ ನಿರ್ಧಾರವನ್ನು ಸರ್ಕಾರ ಪ್ರಕಟಿಸಿದೆ.

ಬಜೆಟ್ ಗಾತ್ರ ಹಾಗೂ ಸಾಲ: ಈ ವರ್ಷದ ಒಟ್ಟು ಆಯವ್ಯಯದ ಗಾತ್ರ 4.48 ಲಕ್ಷ ಕೋಟಿ ರೂ.ಗಳಾಗಿದೆ. ಪ್ರಸ್ತುತ ರಾಜ್ಯದ ಒಟ್ಟು ಸಾಲದ ಪ್ರಮಾಣ 8,24,389 ಕೋಟಿ ರೂ.ಗಳಷ್ಟಿದೆ ಎಂದು ಅಂದಾಜಿಸಲಾಗಿದೆ.

ಉದ್ಯೋಗ ಮತ್ತು ಯುವಜನತೆ:

ವಯೋಮಿತಿ ಸಡಿಲಿಕೆ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಕರಿಗೆ ಸಿಹಿಸುದ್ದಿ ಸಿಕ್ಕಿದ್ದು, ನೇಮಕಾತಿಯ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ಸರ್ಕಾರ ಘೋಷಿಸಿದೆ.

ಹುದ್ದೆಗಳ ಭರ್ತಿ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56 ಸರ್ಕಾರಿ ಹುದ್ದೆಗಳ ಭರ್ತಿಗೆ ಈಗಾಗಲೇ ಅನುಮೋದನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ರೈತಸ್ನೇಹಿ ಕೃಷಿ ಯೋಜನೆಗಳು:

ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ: ಕೃಷಿ ವಲಯದ ಅಭಿವೃದ್ಧಿಗಾಗಿ 100 ಕೋಟಿ ರೂ. ವೆಚ್ಚದಲ್ಲಿ ಈ ಹೊಸ ಯೋಜನೆಯನ್ನು ಜಾರಿಗೊಳಿಸಲಾಗುವುದು.

ಮಣ್ಣು ಮತ್ತು ಬೆಳೆ ಸಂರಕ್ಷಣೆ: ಮಣ್ಣಿನ ಗುಣಮಟ್ಟ ಹೆಚ್ಚಿಸಲು ‘ವಸುಧಾಮೃತ ಯೋಜನೆ’ ಹಾಗೂ ಮುಂದಿನ ಮೂರು ವರ್ಷಗಳಲ್ಲಿ ‘ಸಸ್ಯ ಸಂಜೀವಿ ಯೋಜನೆ’ಯನ್ನು ಜಾರಿಗೆ ತರಲಾಗುವುದು.

ರೈತರಿಗೆ ನೇರ ನೆರವು: ರಾಜ್ಯದ 3 ಲಕ್ಷ ರೈತರಿಗೆ ಕೃಷಿ ಯಂತ್ರೋಪಕರಣಗಳ ವಿತರಣೆ ಹಾಗೂ 7 ಲಕ್ಷ ರೈತರಿಗೆ ಹನಿ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು.

ಕೃಷಿ ಹೊಂಡ: ಮಳೆನೀರನ್ನು ಸದ್ಬಳಕೆ ಮಾಡಿಕೊಳ್ಳಲು 363 ಕೋಟಿ ರೂ. ವೆಚ್ಚದಲ್ಲಿ ಕೃಷಿ ಹೊಂಡಗಳನ್ನು ಸ್ಥಾಪಿಸಲಾಗುವುದು.

ಸ್ಥಳೀಯ ಉತ್ಪನ್ನ ಮತ್ತು ಸಂಸ್ಕೃತಿಗೆ ಒತ್ತು:

50 ಉತ್ಪನ್ನಗಳಿಗೆ GI ಟ್ಯಾಗ್: ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ಉತ್ತೇಜನ ನೀಡುವ ನಿಟ್ಟಿನಲ್ಲಿ, ಕರ್ನಾಟಕದ 50ಕ್ಕೂ ಹೆಚ್ಚು ವಿಶಿಷ್ಟ ಉತ್ಪನ್ನಗಳಿಗೆ ಭೌಗೋಳಿಕ ಸೂಚ್ಯಂಕ (GI Tag) ಮಾನ್ಯತೆ ಕೊಡಿಸಲು ನಿರ್ಧರಿಸಲಾಗಿದೆ.

ಡಾ. ಸಿದ್ದಲಿಂಗಯ್ಯ ಟ್ರಸ್ಟ್: ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಖ್ಯಾತ ದಲಿತ ಕವಿ ಡಾ. ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ, ಅವರ ಹೆಸರಿನಲ್ಲಿ ನೂತನ ಟ್ರಸ್ಟ್ ನಿರ್ಮಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲಾವಣೆ ಮಾಡಲಾಗಿದ್ದು, ಅದಕ್ಕೆ ಶಾಂತವೇರಿ ಗೋಪಲಗೌಡ ಎಂದು ಮರುನಾಮಕರಣ ಮಾಡಲಾಗುವುದು. ರಾಜ್ಯದ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ನೀಡಲಾಗುವುದು. ಇದಕ್ಕೆ 40 ಸಾವಿರ ಕೋಟಿ ರೂ. ವೆಚ್ಚವಾಗಲಿದೆ.

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಪ್ರಸಕ್ತ ಸಾಲಿನಲ್ಲ 15 ಸಾವಿರ ಬೋಧಕ ಹುದ್ದೆಗಳ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವದ ಬಗ್ಗೆ ತಿಳಿಯಲು ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ನಮ್ಮ ಸರ್ಕಾರ ಉದ್ದೇಶಿಸಿದೆ ಎಂದು ಹೇಳಿದ್ದಾರೆ.

ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು.

ಧಾರವಾಡ ಮತ್ತು ಬೆಂಗಳೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗಾಗಿ ತಲಾ 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗುವುದು.

ಸರ್ಕಾರಿ ಶಾಲಾ ಕಾಲೇಜುಗಳಲ್ಲಿ 10 ಮತ್ತು 12ನೇ ತರಗತಿಗಳನ್ನು ವ್ಯಾಸಂಗ ಮಾಡಿ 2025-26ನೇ ಸಾಲಿನಿಂದ ಉನ್ನತ ಶಿಕ್ಷಣವನ್ನು ಮುಂದುವರೆಸುತ್ತಿರುವ 37,000 ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ.ಗಳ ವಿದ್ಯಾರ್ಥಿ ವೇತನವನ್ನು ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ ಹಾಗೂ ಉಳಿದ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದ ವತಿಯಿಂದ ʻದೀಪಿಕಾ ವಿದ್ಯಾರ್ಥಿ ವೇತನʼ ಯೋಜನೆಯಡಿ ನೀಡಲಾಗುತ್ತಿದೆ. ಇದನ್ನು ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಲಾಗುವುದು.

18 ವರ್ಷದವರೆಗಿನ Type-1 Diabetes ಇರುವ ಮಕ್ಕಳಿಗೆ ಉಚಿತ ಇನ್ಸುಲಿನ್ ಪೆನ್‌ಗಳನ್ನು ವಿತರಿಸಲಾಗುವುದು.

ಅತಿಥಿ ಉಪನ್ಯಾಸಕರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಅತಿಥಿ ಉಪನ್ಯಾಸಕರಿಗೆ ಬರೋಬ್ಬರಿ 80 ದಿನಗಳ ಮಾತೃತ್ವ ರಜೆ ಘೋಷಿಸಿದ್ದಾರೆ.

ಪಡಿತರ ಚೀಟಿದಾರರಿಗೆ ಹೆಚ್ಚುವರಿಯಾಗಿ ನೀಡಲಾಗುತ್ತಿದ್ದ 5 ಕೆಜಿ ಅಕ್ಕಿಯ ಬದಲಿಗೆ, ಸರ್ಕಾರ ಈಗ ಇಂದಿರಾ ಕಿಟ್ (Indira Kit) ನೀಡಲು ನಿರ್ಧರಿಸಿದೆ.
ಬಡ ಕುಟುಂಬಗಳಿಗೆ ಅವಶ್ಯಕವಿರುವ ದಿನಬಳಕೆಯ ದಿನಸಿ ವಸ್ತುಗಳು (ತೈಲ, ಬೇಳೆ ಇತ್ಯಾದಿ) ಇದರಲ್ಲಿ ಇರಲಿವೆ. ಬೃಹತ್ ಅನುದಾನ: ಈ ಯೋಜನೆಗಾಗಿ ಸರ್ಕಾರ ಬರೋಬ್ಬರಿ ₹68,200 ಕೋಟಿ ಅನುದಾನ ಮೀಸಲಿಟ್ಟಿದೆ.

BUDGET BREAKING: Great good news for state ration card holders: 'Indira Kit' now being distributed instead of 5 kg rice!
Share. Facebook Twitter LinkedIn WhatsApp Email

Related Posts

BREAKING : ಚಿಕ್ಕಮಗಳೂರಲ್ಲಿ ರಿವಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣು!

1 Min Read

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಐವರು ಆರೋಪಿಗಳಿಗೆ ಬಿಗ್ ರಿಲೀಫ್ : ಜಾಮೀನು ರದ್ದು ಕೋರಿದ್ದ ಅರ್ಜಿ ವಜಾ

1 Min Read

BREAKING : ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಣೆ ಪತ್ತೆ : ಆರೋಪಿ ಅರೆಸ್ಟ್!

1 Min Read
Recent News

BREAKING : ಚಿಕ್ಕಮಗಳೂರಲ್ಲಿ ರಿವಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣು!

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಐವರು ಆರೋಪಿಗಳಿಗೆ ಬಿಗ್ ರಿಲೀಫ್ : ಜಾಮೀನು ರದ್ದು ಕೋರಿದ್ದ ಅರ್ಜಿ ವಜಾ

BREAKING : ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಣೆ ಪತ್ತೆ : ಆರೋಪಿ ಅರೆಸ್ಟ್!

ಕಸ ಸಂಸ್ಕರಣೆ ನೆಪದಲ್ಲಿ 39,000 ಕೋಟಿ ಹಗರಣ, 10,000 ಕೋಟಿ ಕಿಕ್‌ಬ್ಯಾಕ್‌: ಆರ್‌.ಅಶೋಕ ಗಂಭೀರ ಆರೋಪ

State News
KARNATAKA

BREAKING : ಚಿಕ್ಕಮಗಳೂರಲ್ಲಿ ರಿವಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣು!

By ಸುರೇಶ್‌ KARNATAKA 1 Min Read

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಘೋರ ಘಟನೆಯೊಂದು ನಡೆದಿದ್ದು, ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.ಮನೆಯ ಮುಂದೆ ಗುಂಡು ಹಾರಿಸಿಕೊಂಡು ಸುಮಾ…

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಐವರು ಆರೋಪಿಗಳಿಗೆ ಬಿಗ್ ರಿಲೀಫ್ : ಜಾಮೀನು ರದ್ದು ಕೋರಿದ್ದ ಅರ್ಜಿ ವಜಾ

BREAKING : ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಣೆ ಪತ್ತೆ : ಆರೋಪಿ ಅರೆಸ್ಟ್!

ಕಸ ಸಂಸ್ಕರಣೆ ನೆಪದಲ್ಲಿ 39,000 ಕೋಟಿ ಹಗರಣ, 10,000 ಕೋಟಿ ಕಿಕ್‌ಬ್ಯಾಕ್‌: ಆರ್‌.ಅಶೋಕ ಗಂಭೀರ ಆರೋಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.