ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2025-26 ) ಅನ್ನು ಮಂಡಿಸುತ್ತಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
267. ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಮತ್ತು ಗುಣಾತ್ಮಕವಾಗಿ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕಳೆದ ಸಾಲಿನ ಆಯವ್ಯಯದಲ್ಲಿ 5,200 ಕೋಟಿ ರೂ. ವೆಚ್ಚದಲ್ಲಿ ‘ಪ್ರಗತಿ ಪಥ’ ರಸ್ತೆ ಅಭಿವೃದ್ಧಿ ಯೋಜನೆಯನ್ನು ಬಾಹ್ಯ ನೆರವಿನೊಂದಿಗೆ ಪ್ರಾರಂಭಿಸುವುದಾಗಿ ಘೋಷಿಸಲಾಗಿರುತ್ತದೆ. ಯೋಜನೆಯನ್ನು 2025-26 ಅನುಷ್ಠಾನಗೊಳಿಸಲಾಗುವುದು. ಸಾಲಿನಿಂದ
268. ಜಲ ಜೀವನ್ ಮಿಷನ್ ಯೋಜನೆಗಾಗಿ ಇದುವರೆಗೆ ಕೇಂದ್ರ ಸರ್ಕಾರದಿಂದ 11,787 ಕೋಟಿ ರೂ. ಮತ್ತು ರಾಜ್ಯ ಸರ್ಕಾರದಿಂದ 20,703 ens do ಬಿಡುಗಡೆ ಮಾಡಲಾಗಿರುತ್ತದೆ. 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ 3,800 ಕೋಟಿ ರೂ.ಗಳಲ್ಲಿ ಕೇವಲ 571 ಕೋಟಿ ರೂ. ಮಾತ್ರ ಬಿಡುಗಡೆ ಮಾಡಲಾಗಿರುತ್ತದೆ. ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದಿಂದ ಮುಂಗಡವಾಗಿ 8,400 d مه ಬಿಡುಗಡೆ ಮಾಡಲಾಗಿರುತ್ತದೆ. 2025-26 ನೇ ಸಾಲಿಗೆ ಈ ಯೋಜನೆಗಾಗಿ ರಾಜ್ಯ ಸರ್ಕಾರದಿಂದ 6,050 ಕೋಟಿ ರೂ. ಒದಗಿಸಲಾಗುವುದು.
269. ಕಲ್ಯಾಣ ಕರ್ನಾಟಕ ಭಾಗದಲ್ಲಿ 38 ವಿಧಾನಸಭಾ ಕ್ಷೇತ್ರಗಳಿಗೆ ಘೋಷಿಸಲಾದ ‘ಕಲ್ಯಾಣ ಪಥ’ ಯೋಜನೆಯಡಿ 1,000 ಕೋಟಿ ರೂ. ಮೊತ್ತದ 286 ರಸ್ತೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು.
270. ಗ್ರಾಮ ಪಂಚಾಯತಿ ಮಟ್ಟದಲ್ಲಿನ ಅರಿವು ಕೇಂದ್ರಗಳಲ್ಲಿ ವಿಜ್ಞಾನ. ಕಲೆ, ಸಾಹಿತ್ಯ ಮತ್ತು ವೃತ್ತಿ ಮಾರ್ಗದರ್ಶನ ಕುರಿತಾದ ‘ಚಿಗುರು’ ಕಾರ್ಯಕ್ರಮ, ಮಕ್ಕಳು ಮತ್ತು ಮಹಿಳೆಯರಿಗಾಗಿ ‘ಸಂವಿಧಾನ ಸಾಕ್ಷರತೆ’, ಮಹಿಳೆಯರಿಗಾಗಿ ‘ಡಿಜಿಟಲ್ ಮತ್ತು ಆರ್ಥಿಕ ಸಾಕ್ಷರತೆ’ ಹಾಗೂ ಮಹಿಳಾ ಚುನಾಯಿತ ಪ್ರತಿನಿಧಿಗಳಿಗೆ ‘ಅಧಿಕಾರ-ಸಾಕಾರ’ ಸಾಮರ್ಥ್ಯಾಭಿವೃದ್ಧಿ ಹಮ್ಮಿಕೊಳ್ಳಲಾಗುವುದು. ತರಬೇತಿ ಕಾರ್ಯಕ್ರಮಗಳನ್ನು
271. ಸೌರಶಕ್ತಿಯನ್ನು ಬಳಸಿ ಗ್ರಾಮ ಪಂಚಾಯಿತಿಗಳ ವಿದ್ಯುತ್ ಬಿಲ್ಲಿನ ಹೊರೆಯನ್ನು ತಗ್ಗಿಸಲು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್ ಮೈಕ್ರೋ-ಗ್ರಿಡ್ಗಳನ್ನು ಸ್ಥಾಪಿಸಲಾಗುವುದು.
272. ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಮತ್ತು ಗ್ರಾಮೀಣ ಜನರಿಗೆ ವ್ಯವಸ್ಥಿತ ರೀತಿಯಲ್ಲಿ ಸೇವೆಗಳನ್ನು ಒದಗಿಸುವ ಹಿತದೃಷ್ಟಿಯಿಂದ ಕೈಗೊಳ್ಳಲಾಗುವುದು; ಕೆಳಕಂಡ ಉಪಕ್ರಮಗಳನ್ನು i) ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿರುವ ಆಸ್ತಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲು ‘ಇ-ಸ್ವತ್ತು ಅಭಿಯಾನ’ ವನ್ನು ಆರಂಭಿಸಲಾಗುವುದು.
ii) ಪಂಚತಂತ್ರ ತಂತ್ರಾಂಶವನ್ನು ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೂ ವಿಸ್ತರಿಸಲಾಗುವುದು.
iii) ವಿಕೇಂದ್ರಿಕೃತ ಡಿಜಿಟಲ್ ಗ್ರಂಥಾಲಯಗಳ ನಿರ್ವಹಣೆ ಮತ್ತು ಪ್ರಗತಿ ಹಾಗೂ ಸ್ವ-ಸಹಾಯ ಸಂಘಗಳ ಮೂಲಕ ಕೈಗೊಳ್ಳಲಾಗುತ್ತಿರುವ ತ್ಯಾಜ್ಯ ನಿರ್ವಹಣೆಯ ಪ್ರಗತಿಯನ್ನು ಪಂಚತಂತ್ರ ತಂತ್ರಾಂಶದ ನಿರ್ವಹಿಸಲಾಗುವುದು. ಮೂಲಕ
iv) ಹಿರಿಯ ಅಧಿಕಾರಿಗಳಿಂದ ಗ್ರಾಮ ಪಂಚಾಯತಿಗಳನ್ನು ದತ್ತು ಪಡೆದು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪಂಚಾಯತಿ ದತ್ತು’ ಕಾರ್ಯಕ್ರಮವನ್ನು ಆರಂಭಿಸಲಾಗುವುದು.
273. ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಈ ಕೆಳಕಂಡ ಕಾರ್ಯಯೋಜನೆಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ:
i) ತ್ಯಾಜ್ಯ ನೀರನ್ನು ನಿರ್ವಹಣೆ ಮಾಡಲು 500 ಗ್ರಾಮಗಳಲ್ಲಿ ಬೂದು ನೀರು ನಿರ್ವಹಣಾ ನಿರ್ಮಿಸಲಾಗುವುದು. ಘಟಕಗಳನ್ನು
ii) ಗ್ರಾಮೀಣ ಪ್ರದೇಶದ ಸ್ವ-ಸಹಾಯ ಪಾಲ್ಗೊಳ್ಳುವಿಕೆಯೊಂದಿಗೆ ಮಿಶ್ರ ಬೆಳೆ ಪದ್ಧತಿಯಲ್ಲಿ ಸಂಬಾರ ಪದಾರ್ಥಗಳು ಹಾಗೂ ಹಣ್ಣಿನ ಬೆಳೆಗಳನ್ನು ಒಟ್ಟು 5,000 ಎಕರೆ ಪ್ರದೇಶದಲ್ಲಿ ಬೆಳೆಸಲಾಗುವುದು.
iii) ಗ್ರಾಮೀಣ ಪ್ರದೇಶಗಳಲ್ಲಿ ಹಾದುಹೋಗುವ ರಾಜ್ಯ ಮತ್ತು ಜಿಲ್ಲಾ ರಸ್ತೆಗಳ 5,000 ಕಿ.ಮೀ. ಬದಿಗಳಲ್ಲಿ ಸಸಿಗಳನ್ನು ಬೆಳೆಸಿ ‘ಹಸಿರು ಪಥ ‘ಗಳನ್ನು ನಿರ್ಮಾಣ ಮಾಡಲಾಗುವುದು.
iv) ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ‘ಕೃಷಿ ಪಥ’ ಯೋಜನೆಯನ್ನು ಜಾರಿಗೊಳಿಸಲಾಗುವುದು.
v) ರೈತರ ಜಮೀನುಗಳಲ್ಲಿ ಅಂತರ್ಜಲ ಹೆಚ್ಚಳ ಹಾಗೂ ಮಣ್ಣಿನ ಸಂರಕ್ಷಣೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ‘ಕೃಷಿ ಕವಚ’ ಕಾರ್ಯಕ್ರಮ ರೂಪಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಒಟ್ಟು 50,000 ಹೆಕ್ಟೇರ್ ಬದು ನಿರ್ಮಾಣ ಮಾಡಲಾಗುವುದು.
274. ನೀರು ಸರಬರಾಜು ಮೂಲಭೂತ ಸೌಕರ್ಯಗಳ ಸುಸ್ಥಿರ ಮತ್ತು ವೈಜ್ಞಾನಿಕ ನಿರ್ವಹಣೆ ಸಲುವಾಗಿ ಭೌಗೋಳಿಕ ಮಾಹಿತಿ ವ್ಯವಸ್ಥೆ (GIS) ಆಧಾರಿತ ಮೊಬೈಲ್ ಮತ್ತು ವೆಬ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುವುದು.
275. ಗ್ರಾಮ ಪಂಚಾಯತಿಗಳ ಸುಸ್ಥಿರ ಆದಾಯದ ಮೂಲಗಳನ್ನು ಬಲಪಡಿಸಲು ಗ್ರಾಮ ಪಂಚಾಯತಿ ಸ್ವತ್ತುಗಳನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ಆದಾಯದ ಅನುಕೂಲವಾಗುವಂತೆ ಅಭಿವೃದ್ಧಿಪಡಿಸಲಾಗುವುದು. ಸೃಜನೆಗೆ
ಯೋಜನೆ
276. ರಾಜ್ಯದ ಅಭಿವೃದ್ಧಿ ಹಾಗೂ ಪ್ರಾದೇಶಿಕ ಅಸಮತೋಲನೆ ಬಗ್ಗೆ ಅಧ್ಯಯನ ನಡೆಸಲು ಪ್ರೊ. ಎಂ. ಗೋವಿಂದರಾವ್ ರವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಪ್ರಾದೇಶಿಕ ಆಸಮತೋಲನಾ ನಿವಾರಣಾ ಸಮಿತಿಯನ್ನು ರಚಿಸಲಾಗಿದೆ. ಸದರಿ ಸಮಿತಿಯು ನೀಡುವ ವರದಿಯನ್ನು ಆಧರಿಸಿ, ಪ್ರಾದೇಶಿಕ ಅಸಮತೋಲನಾ ನಿವಾರಣೆಗೆ ಸೂಕ್ತ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಆಳವಡಿಸಿಕೊಳ್ಳಲಾಗುವುದು.
277. ಕಲ್ಯಾಣ ಕರ್ನಾಟಕ ಪ್ರದೇಶಗಳ ಅಭಿವೃದ್ಧಿಗೆ 5,000 ಕೋಟಿ ರೂ. ಮೊತ್ತದ ಹೊಸ ಯೋಜನೆಗಳನ್ನು KKRDB ವತಿಯಿಂದ ಅನುಷ್ಠಾನಗೊಳಿಸಲಾಗುವುದು. ಕಾಮಗಾರಿಗಳ ಗುಣಮಟ್ಟವನ್ನು ಖಚಿತ ಪಡಿಸಿಕೊಳ್ಳಲು ವಿಶೇಷ ಕ್ರಮ ತೆಗೆದುಕೊಳ್ಳಲಾಗುವುದು.
278. ಬಯಲುಸೀಮೆ, ಮಲೆನಾಡು ಹಾಗೂ ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಗಳಿಗೆ ಒಟ್ಟಾರೆಯಾಗಿ 83 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.
279. ರಾಜ್ಯದ ಗಡಿಗಳಲ್ಲಿನ ಮೂಲಸೌಕರ್ಯ ಹಾಗೂ ಸಾಮಾಜಿಕ ಸುಧಾರಣೆ ಕಾರ್ಯಕ್ರಮಗಳನ್ನು భరిణామకారియాగి ಜಾರಿಗೊಳಿಸಲು ಗಡಿ ಅಭಿವೃದ್ಧಿ ಪ್ರಾಧಿಕಾರವನ್ನು ಯೋಜನಾ ಇಲಾಖೆಯ ವ್ಯಾಪ್ತಿಗೆ ತರಲಾಗುವುದು.