ಬೆಂಗಳೂರು : ಮುಂದಿನ ತಿಂಗಳು ಫೆಬ್ರುವರಿ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದು ಈ ಹಿನ್ನೆಲೆಯಲ್ಲಿ ಇಂದಿನಿಂದ ಬಜೆಟ್ ಕುರಿತಂತೆ ಸಿಎಂ ಸಿದ್ದರಾಮಯ್ಯ ಪೂರ್ವಭಾವಿ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಈ ಪೂರ್ವಭಾವಿ ಸಭೆ ನಡೆಯಲಿದೆ ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಫೆಬ್ರವರಿ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಅದರ ಅಂಗವಾಗಿ ಈ ಹಿನ್ನೆಲೆಯಲ್ಲಿ ಹಿಂದಿನಿಂದ ವಿವಿಧ ಇಲಾಖೆಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದ್ದು, ಇಂದು ಹತ್ತಕ್ಕೂ ಹೆಚ್ಚು ಇಲಾಖೆಯ ಅಧಿಕಾರಿಗಳ ಜೊತೆಗೆ ಸಿದ್ದರಾಮಯ್ಯ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಮತ್ತು ಪಶು ಸಂಗೋಪನೆ ಇಲಾಖೆ, ಬೆಂಗಳೂರು ಅಭಿವೃದ್ಧಿ, ಉನ್ನತ ಶಿಕ್ಷಣ ಇಲಾಖೆ, ಜಲಸಂಪನ್ಮೂಲ ಇಲಾಖೆ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ,ಪರಿಸರ ಮತ್ತು ಜೀವಶಾಸ್ತ್ರ ಅರಣ್ಯ ಇಲಾಖೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.