ಬೆಂಗಳೂರು : ರಾಜ್ಯದ ಕಬ್ಬು ( Sugar Cane) ಬೆಳೆಗಾರರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು , ಪ್ರತೀ ಮೆಟ್ರಿಕ್ ಟನ್ ಗೆ 100 ರೂ. ಹೆಚ್ಚು ಪಾವತಿಸಲು ಸೂಚನೆ ನೀಡಲಾಗಿದೆ.
ಮೊಲ್ಯಾಸಿಸ್ ಮಾರಾಟದಿಂದ ಕಾರ್ಖಾನೆಗಳಿಗೆ ಬರುವ ಲಾಭಾಂಶವನ್ನು ರೈತರಿಗೆ ವರ್ಗಾಯಿಸಲು ಸಕ್ಕರೆ ಕಾರ್ಖಾನೆಗಳಿಗೆ ಆದೇಶ ನೀಡಲಾಗಿದ್ದು, ಎಫ್ಆರ್ಪಿ ದರ ಹೊರತುಪಡಿಸಿ, ಪ್ರತೀ ಮೆಟ್ರಿಕ್ ಟನ್ಗೆ 100 ರೂಪಾಯಿ ಹೆಚ್ಚು ಪಾವತಿಸಲು ಸರ್ಕಾರ ಸೂಚನೆ ನೀಡಿದೆ.
ಇತ್ತೀಚೆಗೆ ರಾಜ್ಯದ ಕಬ್ಬು ಬೆಳೆಗಾರರಿಗೆ ಪ್ರತಿ ಮೆಟ್ರಿಕ್ ಟನ್ ಗೆ 50 ರೂ.ಹೆಚ್ಚುವರಿ ಪಾವತಿಗೆ ಸರ್ಕಾರ ಆದೇಶ ಹೊರಡಿಸಿತ್ತು. ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದ ಕಬ್ಬು ಬೆಳೆಗಾರರ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದೆ.
ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶ ಸೇರಿ ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಬಾಗಲಕೋಟೆ ಸೇರಿ ಹಲವು ಕಡೆ ಕಬ್ಬು ಬೆಳೆಗಾರರು ಭಾರೀ ಪ್ರತಿಭಟನೆ ನಡೆಸಿದ್ದರು. ಡಿ.5 ರಂದು ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ಪ್ರತಿ ಮೆಟ್ರಿಕ್ ಟನ್ ಗೆ 50 ರೂ ಹೆಚ್ಚುವರಿಯಾಗಿ ಪಾವತಿಸಬೇಕು ಎಂದು ಸಕ್ಕರೆ ಸಚಿವ ಶಂಕರ್ ಪಾಟೀಲ್ ಘೋಷಣೆ ಮಾಡಿದ್ದರು.ಇತ್ತೀಚೆಗೆ ವಿಕಾಸಸೌಧದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ಕಬ್ಬು ನಿಯಂತ್ರಣ ಮಂಡಳಿ ಸಭೆ ನಡೆದಿದ್ದು, ಎಫ್ಆರ್ ಪಿ ದರ ಪಾವತಿ ಬಳಿಕ ಪ್ರತಿ ಟನ್ ಗೆ ಹೆಚ್ಚುವರಿಯಾಗಿ 50 ರೂ ನಂತೆ ಒಟ್ಟು 204.47 ಕೋಟಿ ಬಿಡುಗಡೆ ಮಾಡಲಾಗಿತ್ತು.
BREAKING NEWS : ಹೊಸ ವರ್ಷಕ್ಕೆ ರಾಜ್ಯದ ಜನತೆಗೆ ಗುಡ್ ನ್ಯೂಸ್ : ವಿದ್ಯುತ್ ದರ ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ