Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಾರ್ವಜನಿಕ ಸ್ಥಳಗಳ ‘ಫ್ರೀ ವೈ-ಫೈ’ ಬಳಸುವವರೇ ಎಚ್ಚರ : ಇದು ನಿಮ್ಮ ಬ್ಯಾಂಕ್ ಖಾತೆ ಖಾಲಿ ಮಾಡಬಹುದು

BIG NEWS: ಅಕ್ರಮ ರೇಷನ್ ದಂಧೆಗೆ ಬೀಳಲಿದೆ ಕಂಪ್ಲೀಟ್ ಬ್ರೇಕ್ : ಕೇಂದ್ರ ಸರ್ಕಾರದಿಂದ ಬಂತು ‘ಸಾರ್ಥಕ್ ಪಿಡಿಎಸ್’ ತಂತ್ರಜ್ಞಾನ.!

BREAKING : ಡಿಕೆಶಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ಸ್ವೀಕಾರ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ : ರಾಜ್ಯದ ಶಾಲಾ-ಕಾಲೇಜುಗಳಲ್ಲಿ 15,000 ಬೋಧಕರ ನೇಮಕಾತಿ !
KARNATAKA

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ : ರಾಜ್ಯದ ಶಾಲಾ-ಕಾಲೇಜುಗಳಲ್ಲಿ 15,000 ಬೋಧಕರ ನೇಮಕಾತಿ !

By kannadanewsnow57

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಕೊಡುಗೆಗಳನ್ನು ಘೋಷಿಸಲಾಗಿದೆ. ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಬರೋಬ್ಬರಿ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸಿಎಂ ಪ್ರಕಟಿಸಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಇದರೊಂದಿಗೆ ಶಾಲಾ ಮೂಲಸೌಕರ್ಯ ಅಭಿವೃದ್ಧಿ, ತಂತ್ರಜ್ಞಾನ ಅಳವಡಿಕೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ಹೈಲೈಟ್ಸ್ ಇಲ್ಲಿದೆ:

ಶಿಕ್ಷಕರ ನೇಮಕಾತಿ ಮತ್ತು ಶಾಲೆಗಳ ಉನ್ನತೀಕರಣ

ಬೃಹತ್ ನೇಮಕಾತಿ: 2026-27ನೇ ಸಾಲಿನಲ್ಲಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳ ಭರ್ತಿ.

ಕರ್ನಾಟಕ ಪಬ್ಲಿಕ್ ಶಾಲೆ (KPS): ʻಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಯೋಜನೆಯಡಿ ಒಟ್ಟು 800 ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಇದಕ್ಕಾಗಿ ಮುಂದಿನ 3 ವರ್ಷಗಳಲ್ಲಿ 3,900 ಕೋಟಿ ರೂ. ಮೀಸಲು. (ವರ್ಗಾವಣೆ ಕೌನ್ಸೆಲಿಂಗ್‌ ವೇಳೆ ಈ ಶಾಲೆಗಳ ಹುದ್ದೆಗಳ ಭರ್ತಿಗೆ ಮೊದಲ ಆದ್ಯತೆ).

ಶಾಲೆಗಳ ಮೇಲ್ದರ್ಜೆ: 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಪ್ರೌಢ ಶಾಲೆಗಳಾಗಿ ಮತ್ತು 50 ಪ್ರೌಢ ಶಾಲೆಗಳು ಪಿಯು ಕಾಲೇಜುಗಳಾಗಿ ಉನ್ನತೀಕರಣ.

ಮೂಲಸೌಕರ್ಯ ಮತ್ತು ನಿರ್ವಹಣಾ ಅನುದಾನ
ಹೊಸ ಕೊಠಡಿ ನಿರ್ಮಾಣ ಮತ್ತು ದುರಸ್ತಿಗೆ ಬರೋಬ್ಬರಿ 565 ಕೋಟಿ ರೂ. ಅನುದಾನ.

ಶೌಚಾಲಯ ನಿರ್ಮಾಣಕ್ಕೆ 75 ಕೋಟಿ ರೂ. ಹಾಗೂ ಪೀಠೋಪಕರಣ ಖರೀದಿಗೆ 25 ಕೋಟಿ ರೂ.

ಶಾಲಾ-ಕಾಲೇಜುಗಳ ನಿರ್ವಹಣೆಗಾಗಿ 125 ಕೋಟಿ ರೂ. ಮೀಸಲಿಡಲಾಗಿದ್ದು, ಈ ಹಣವನ್ನು ನೇರವಾಗಿ ಶಾಲಾ ಅಭಿವೃದ್ಧಿ ಸಮಿತಿ (SDMC) ಖಾತೆಗೆ ವರ್ಗಾವಣೆ ಮಾಡಲಾಗುವುದು.

ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಮರುನಿರ್ಮಾಣಕ್ಕೆ 10 ಕೋಟಿ ರೂ.

ತಂತ್ರಜ್ಞಾನ ಮತ್ತು ನೂತನ ಸೌಲಭ್ಯಗಳು
AI ಡಿಜಿಟಲ್ ಟ್ಯೂಟರ್: ಐಐಟಿ ಧಾರವಾಡದ ಸಹಯೋಗದಲ್ಲಿ 8 ರಿಂದ 12ನೇ ತರಗತಿಯ 12.28 ಲಕ್ಷ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ (AI) ಆಧಾರಿತ ವೈಯಕ್ತಿಕ ಕಲಿಕಾ ಡಿಜಿಟಲ್ ಟ್ಯೂಟರ್ ಸೌಲಭ್ಯ (5 ಕೋಟಿ ರೂ. ವೆಚ್ಚ).

ದ್ವಿಭಾಷಾ ಬೋಧನೆ: ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ತರಗತಿ ಜಾರಿಗೆ ಅನುಕೂಲವಾಗುವಂತೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಂಗ್ಲಿಷ್ ಭಾಷಾ ತರಬೇತಿ ನೀಡಲು 24 ಕೋಟಿ ರೂ. ಮೀಸಲು.

ಉಚಿತ ಪುಸ್ತಕ ವಿತರಣೆ: 2026-27ರಿಂದ ‘ವಿದ್ಯಾವಿಕಾಸ ಯೋಜನೆ’ಯಡಿ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಪೂರ್ವ ಪ್ರಾಥಮಿಕ ಮಕ್ಕಳಿಗೆ ಚಟುವಟಿಕೆ ಪುಸ್ತಕ ಹಾಗೂ 1-10ನೇ ತರಗತಿ ಮಕ್ಕಳಿಗೆ ಮೌಲ್ಯ ಶಿಕ್ಷಣ ಪುಸ್ತಕ ವಿತರಣೆ.

ನೇರ ನಗದು ವರ್ಗಾವಣೆ (DBT): ವಿದ್ಯಾರ್ಥಿಗಳಿಗೆ ಸಿಗುವ ವಿವಿಧ ಸವಲತ್ತುಗಳನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆ ಸಂಪೂರ್ಣ ಆನ್‌ಲೈನ್‌.

ವಿದ್ಯಾರ್ಥಿಗಳ ಆರೋಗ್ಯ ಮತ್ತು ಕಟ್ಟುನಿಟ್ಟಿನ ನಿಯಮಗಳು
ಸೋಷಿಯಲ್ ಮೀಡಿಯಾ ನಿಷೇಧ: ಹೆಚ್ಚುತ್ತಿರುವ ಮೊಬೈಲ್ ಗೀಳಿನಿಂದ ಮಕ್ಕಳನ್ನು ರಕ್ಷಿಸಲು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸುವ ದಿಟ್ಟ ಹೆಜ್ಜೆಯನ್ನು ಸರ್ಕಾರ ಇಟ್ಟಿದೆ.

ಡ್ರಗ್ಸ್ ಮುಕ್ತ ಕ್ಯಾಂಪಸ್: ಶಾಲಾ-ಕಾಲೇಜು ಮತ್ತು ವಿವಿಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಕಠಿಣ ನಿಯಮ ಜಾರಿ ಹಾಗೂ ಜಾಗೃತಿ ಕಾರ್ಯಕ್ರಮ.

ಮಾನಸಿಕ ಆರೋಗ್ಯ: ವಿದ್ಯಾರ್ಥಿಗಳ ಒತ್ತಡ ನಿವಾರಣೆಗೆ 204 BRC ಕೇಂದ್ರಗಳಲ್ಲಿ ತಲಾ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರ (Counselors) ನೇಮಕ.

Bumper for teacher post aspirants: Recruitment of 15000 teachers in state schools and colleges!
Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕ ಸ್ಥಳಗಳ ‘ಫ್ರೀ ವೈ-ಫೈ’ ಬಳಸುವವರೇ ಎಚ್ಚರ : ಇದು ನಿಮ್ಮ ಬ್ಯಾಂಕ್ ಖಾತೆ ಖಾಲಿ ಮಾಡಬಹುದು

2 Mins Read

BREAKING : ಡಿಕೆಶಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ಸ್ವೀಕಾರ.!

1 Min Read

BIG NEWS : ಡಿ.ಕೆ ಶಿವಕುಮಾರ್ ‘CM’ ಆಗ್ತಾರೆ ಎಂದು 40 ವರ್ಷಗಳ ಹಿಂದೆಯೇ ಹೇಳಿದ್ದೆ : ನಿಜವಾಯ್ತು ದ್ವಾರಕನಾಥ್ ಗುರೂಜಿ ಭವಿಷ್ಯ.!

2 Mins Read
Recent News

ALERT : ಸಾರ್ವಜನಿಕ ಸ್ಥಳಗಳ ‘ಫ್ರೀ ವೈ-ಫೈ’ ಬಳಸುವವರೇ ಎಚ್ಚರ : ಇದು ನಿಮ್ಮ ಬ್ಯಾಂಕ್ ಖಾತೆ ಖಾಲಿ ಮಾಡಬಹುದು

BIG NEWS: ಅಕ್ರಮ ರೇಷನ್ ದಂಧೆಗೆ ಬೀಳಲಿದೆ ಕಂಪ್ಲೀಟ್ ಬ್ರೇಕ್ : ಕೇಂದ್ರ ಸರ್ಕಾರದಿಂದ ಬಂತು ‘ಸಾರ್ಥಕ್ ಪಿಡಿಎಸ್’ ತಂತ್ರಜ್ಞಾನ.!

BREAKING : ಡಿಕೆಶಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ಸ್ವೀಕಾರ.!

BIG NEWS : ಡಿ.ಕೆ ಶಿವಕುಮಾರ್ ‘CM’ ಆಗ್ತಾರೆ ಎಂದು 40 ವರ್ಷಗಳ ಹಿಂದೆಯೇ ಹೇಳಿದ್ದೆ : ನಿಜವಾಯ್ತು ದ್ವಾರಕನಾಥ್ ಗುರೂಜಿ ಭವಿಷ್ಯ.!

State News
KARNATAKA

ALERT : ಸಾರ್ವಜನಿಕ ಸ್ಥಳಗಳ ‘ಫ್ರೀ ವೈ-ಫೈ’ ಬಳಸುವವರೇ ಎಚ್ಚರ : ಇದು ನಿಮ್ಮ ಬ್ಯಾಂಕ್ ಖಾತೆ ಖಾಲಿ ಮಾಡಬಹುದು

By kannadanewsnow57 KARNATAKA 2 Mins Read

ಉಚಿತ ಸಾರ್ವಜನಿಕ ವೈ-ಫೈ (Wi-Fi) ನಮಗೆ ಅತ್ಯಂತ ಅನುಕೂಲಕರವಾಗಿ ಭಾಸವಾಗುತ್ತದೆ. ವಿಮಾನ ನಿಲ್ದಾಣಗಳು, ಕೆಫೆಗಳು, ಶಾಪಿಂಗ್ ಮಾಲ್‌ಗಳು, ಹೋಟೆಲ್‌ಗಳು ಮತ್ತು…

BREAKING : ಡಿಕೆಶಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ಸ್ವೀಕಾರ.!

BIG NEWS : ಡಿ.ಕೆ ಶಿವಕುಮಾರ್ ‘CM’ ಆಗ್ತಾರೆ ಎಂದು 40 ವರ್ಷಗಳ ಹಿಂದೆಯೇ ಹೇಳಿದ್ದೆ : ನಿಜವಾಯ್ತು ದ್ವಾರಕನಾಥ್ ಗುರೂಜಿ ಭವಿಷ್ಯ.!

BIG NEWS : ಡಿಕೆ ಶಿವಕುಮಾರ್ ಮುಂದಿನ ಹಾದಿ ಮುಳ್ಳಿನಿಂದ ಕೂಡಿದೆ : ಜ್ಯೋತಿಷಿ ದ್ವಾರಕನಾಥ್ ಹೇಳಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.