ಬೆಂಗಳೂರು : ರಾಜ್ಯ ಸರ್ಕಾರವು ತೊಗರಿ ಬೆಳೆಗಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, 450 ರೂ. ಪ್ರೋತ್ಸಾಹಧನ ಘೋಷಣೆ ಮಾಡಲಾಗಿದೆ.
ಪ್ರತಿ ಕ್ವಿಂಟಾಲ್ ತೊಗರಿಗೆ ರೂ.7,550 ಕನಿಷ್ಠ ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರದಿಂದ ರೂ.450 ಪ್ರೋತ್ಸಾಹಧನ ಘೋಷಣೆ ಮಾಡಲಾಗಿದೆ. ಈಗಾಗಲೇ ಆರ್ಥಿಕ ಇಲಾಖೆಯ ಅನುಮೋದನೆ ಕೂಡ ದೊರೆತಿದ್ದು ನಾಡಿನ ತೊಗರಿ ಬೆಳೆಗಾರರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ರಾಜ್ಯದ ರೈತರ ಜೊತೆ ನಮ್ಮ ಸರ್ಕಾರ ಸದಾಕಾಲ ಇರಲಿದೆ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.