ಸುಭಾಷಿತ :

Monday, March 30 , 2020 1:48 AM

ಹಾಲು ಉತ್ಪಾದಕರಿಗೆ ಕೇಂದ್ರದಿಂದ` ಬಂಪರ್’ ಗಿಫ್ಟ್!


Saturday, February 22nd, 2020 6:58 am

ನವದೆಹಲಿ : ಕೇಂದ್ರ ಸರ್ಕಾರವು ಹಾಲು ಉತ್ಪಾದಕರಿಗೆ ಬಂಪರ್ ಕೊಡುಗೆಯನ್ನು ನೀಡಿದ್ದು, ಹೈನುಗಾರಿಕೆ ಕ್ಷೇತ್ರಕ್ಕೆ ಉತ್ತೇಜನ ನೀಡಲು 4,558 ಕೋಟಿ ರೂ. ಮೊತ್ತದ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್, ಈ ಯೋಜನೆಯ ಪರಿಷ್ಕೃತ ಅನುದಾನ 11.184 ಕೋಟಿ ಆಗಲಿದೆ. ರೈತ ಸಮೂಹಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಈ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಕೇಂದ್ರ ಸರ್ಕಾರದ ಯೋಜನೆಯಿಂದ ಡೇರಿ ರೈತರ ಸಾಲದ ಮೇಲಿನ ಸಬ್ಸಿಡಿ ಅಥವಾ ಬಡ್ಡಿಗೆ ನೀಡುವ ಸಹಾಯಧನ ಶೇ. 2 ರಿಂದ 2.5 ಕ್ಕೆ ಏರಿಕೆಯಾಗಲಿದೆ. ಈ ಯೋಜನೆಯಿಂದ ದೇಶದ 95 ಲಕ್ಷ ರೈತರಿಗೆ ಲಾಭವಾಗಲಿದೆ.ಡೇರಿ ಸಂಸ್ಕರಣೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ನಿಧಿ ಯೋಜನೆಯನ್ವಯ ಸಾಲದ ಮೇಲಿನ ಸಬ್ಸಿಡಿ ಪ್ರಮಾಣ ಹೆಚ್ಚಿಸಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions