ಬೆಂಗಳೂರು: ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಬಂಪರ್ ಕೊಡುಗೆಯನ್ನು ಘೋಷಿಸಿದೆ. ವಿವಿಧ ಸಹಾಯಧನ ಯೋಜನೆ ಸೇರಿದಂತೆ ಮಹತ್ವದ ಕೊಡುಗೆಗಳನ್ನು ನೀಡುತ್ತಿರೋದಾಗಿ ತಿಳಿಸಿದೆ.

ಫೇಲೋಶಿಪ್ ಸೌಲಭ್ಯಕ್ಕಾಗಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನೀಲ್ ಕುಮಾರ್ ಅವರು, ಕಾರ್ಮಿಕರಿಗೆ ಹೆರಿಗೆ ಸಹಾಯಧನವನ್ನು ಗಂಡು-ಹೆಣ್ಣು ಎನ್ನುವ ಭೇದ-ಭಾವ ಇಲ್ಲದೇ 50 ಸಾವಿರ ರೂಗಳಿಗೆ ಹೆಚ್ಚಳ ಮಾಡಲಾಗಿದೆ ಎಂದಿದ್ದಾರೆ.

BREAKING: ವೇಶ್ಯಾವಾಟಿಕೆ ನಡೆಸುತ್ತಿದ್ದ ಮೇಘಾಲಯ ಬಿಜೆಪಿ ನಾಯಕನ ಬಂಧನ | Meghalaya BJP Leader

ಅಂತಿಮ ಸಂಸ್ಕಾರ ವೆಚ್ಚ ಸಹಾಯಧನ ಮೊತ್ತವನ್ನು ರೂ.50 ಸಾವಿರದಿಂದ 71 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. ವೈದ್ಯಕೀಯ ಸಹಾಯಧನ ರೂ.10 ಸಾವಿರದಿಂದ 20 ಸಾವಿರಕ್ಕೆ ಏರಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

BREAKING NEWS: 1ನೇ ತರಗತಿಗೆ ದಾಖಲು ಮಾಡಲು ಕನಿಷ್ಠ ವಯೋಮಿತಿ 6 ವರ್ಷಕ್ಕೆ ಹೆಚ್ಚಿಸಿ ‘ರಾಜ್ಯ ಸರ್ಕಾರ’ ಆದೇಶ

ಕಾರ್ಮಿಕರು ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಮೊಬೈಲ್ ಯೂನಿಟ್ ಗಳ ಸ್ಥಾಪನೆ, ಅವಶ್ಯಕತೆ ಇದ್ದಾಗ ಪೌಷ್ಠಿಕ ಆಹಾರ ಕಿಟ್ ವಿತರಣೆ ಮಾಡಲಾಗುತ್ತದೆ. ಕೋವಿಡ್ ನಿಂದ ಫಲಾನುಭವಿ ಮೃತಪಟ್ಟ ಸಂದರ್ಭದಲ್ಲಿ ಮೃತರ ಅವಲಂಬಿತರಿಗೆ 2 ಲಕ್ಷ ಸಹಾಯಧನ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

Share.
Exit mobile version