BREAKING: ದೆಹಲಿ ಏರ್ ಪೋರ್ಟ್ ನಲ್ಲಿ ಬಸ್ಸಿಗೆ ಬೆಂಕಿ: ವಿಮಾನದ ಪಕ್ಕದಲ್ಲೇ ಹೊತ್ತಿ ಉರಿದ ಬಸ್
ನವದೆಹಲಿ: ದೆಹಲಿಯ ವಿಮಾನ ನಿಲ್ದಾಣದಲ್ಲೇ ಬಸ್ ಹೊತ್ತಿ ಉರಿದಿದೆ. ವಿಮಾನದ ಪಕ್ಕದಲ್ಲೇ ಬಸ್ ಹೊತ್ತಿ ಉರಿದಿದ್ದರಿಂದ ಕೆಲ ಕಾಲ ಆತಂಕಕ್ಕೂ ಕಾರಣವಾಗಿತ್ತು. ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3ನಲ್ಲಿ ಈ ಘಟನೆ ಸಂಭವಿಸಿದೆ. ಪ್ರಯಾಣಿಕರನ್ನು ಕರೆದೊಯ್ಯುವ ಬಸ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ಬಸ್ಸಿಗೆ ವ್ಯಾಪಿಸಿದ್ದರಿಂದ ಧಗಧಗಿಸಿ ಹೊತ್ತಿ ಉರಿದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. #ChhathPujaBus fire at Delhi Airport pic.twitter.com/t1wyRFkbGf — AIRCRAFT MECHANIC (@GOD3636) October 28, 2025
Copy and paste this URL into your WordPress site to embed
Copy and paste this code into your site to embed