BREAKING NEWS: ಕೊಪ್ಪಳದಲ್ಲಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕೊಪ್ಪಳ: ನಿಂತಿದ್ದಂತ ಲಾರಿಗೆ ಬಸ್ ಡಿಕ್ಕಿಯಾದ ಪರಿಣಾಮ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರೋ ಘಟನೆ ಇಂದು ನಡೆದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿಯಲ್ಲಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿದೆ. ಬಸ್ಸಿನಲ್ಲಿದ್ದಂತ 50 ಮಂದಿ ಪ್ರಯಾಣಿಕರಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿರೋದಾಗಿ ತಿಳಿದು ಬಂದಿದೆ. ಬಸ್ ಅಪಘಾತದಲ್ಲಿ ಗಾಯಗೊಂಡಂತ ಗಾಯಾಳುಗಳನ್ನು ಕುಷ್ಟಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಾವುದೇ ಪ್ರಾಣಾಪಾಯ ಉಂಟಾಗಿರೋ ಬಗ್ಗೆ ತಿಳಿದು ಬಂದಿಲ್ಲ. ಈ ಸಂಬಂಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Continue reading BREAKING NEWS: ಕೊಪ್ಪಳದಲ್ಲಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ