ಮಂಡ್ಯ: ಜಿಲ್ಲೆಯಲ್ಲಿ ಸಾರಿಗೆ ಬಸ್ ಒಂದು ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಪುಟ್ ಪಾತ್ ಏರಿದೆ. ರಸ್ತೆ ಬದಿಯಲ್ಲಿನ ರೈಲಿಂಗ್ಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದಂತ 60ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳ ಬಳಿಯಲ್ಲಿ ರಾಜ್ಯ ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದ ರೈಲಿಂಗ್ಸ್ ಗೆ ಡಿಕ್ಕಿಯನ್ನು ಕೆ ಎಸ್ ಆರ್ ಟಿ ಸಿ ಬಸ್ ಹೊಡೆದಿದೆ. ಆ ಬಳಿಕ ಬಸ್ ನಿಂತಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ 60ಕ್ಕೂ ಹೆಚ್ಚು ಪ್ರಯಾಣಿಕರು ಪಾರಾಗಿರುವುದಾಗಿ ತಿಳಿದು ಬಂದಿದೆ.
ಕೆ.ಆರ್.ಪೇಟೆಯಿಂದ ಭೇರ್ಯ ಕಡೆಗೆ 60.ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದ ಬಸ್ ಇದಾಗಿದೆ. ಧಿಡೀರ್ ಬಸ್ ಬ್ರೇಕ್ ಫೇಲ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ರೈಲಿಂಗ್ಸ್ ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 60ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರು ಆಗಿದ್ದಾರೆ. ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಗಿರೀಶ್ ರಾಜ್, ಮಂಡ್ಯ








