ಗದಗ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಒಂದು ಪಲ್ಟಿಯಾದ ಪರಿಣಾಮ, ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗದಗ ಹಿರೇಕೊಪ್ಪ ಗ್ರಾಮದ ಬಳಿಯಲ್ಲಿ ನಡೆದಿದೆ.
ಗದಗದಿಂದ ಬಳಗಾನೂರು ಗ್ರಾಮಕ್ಕೆ ಹೊರಟಿದ್ದಂತ NWKRTC ಬಸ್, ಚಾಲಕನ ನಿಯಂತ್ರಣ ತಪ್ಪಿ ಹಿರೇಕೊಪ್ಪ ಗ್ರಾಮದ ಬಳಿಯಲ್ಲಿ ಪಲ್ಟಿಯಾಗಿದೆ. ಈ ಪರಿಣಾಮ ಬಸ್ ನಲ್ಲಿದ್ದಂತ ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಬಸ್ ಪಲ್ಟಿಯಾಗಿದ್ದನ್ನು ಗಮನಿಸಿದಂತ ಸ್ಥಳೀಯರು ಬಸ್ಸಿನಲ್ಲಿದ್ದಂತ ಗಾಯಾಳು ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ. ಈ ಸಂಬಂಧ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.